ಇರುವೈಲಿನಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಾಣಿ ತಿದ್ದುಪಡಿ ಶಿಬಿರ

Date:

ಮೂಡುಬಿದಿರೆ: ಫ್ರೆಂಡ್ಸ್ ಕ್ಲಬ್ (ರಿ )ಇರುವೈಲು ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಾಣಿ ಮತ್ತು ತಿದ್ದುಪಡಿ ಶಿಬಿರವು ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಫ್ರೆಂಡ್ಸ್ ಕ್ಲಬ್ ಹಾಲ್‌ನಲ್ಲಿ ಭಾನುವಾರ ನಡೆಯಿತು.

ಇರುವೈಲು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಲಲಿತ ಮುಗೇರ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈ ಸಿದರು. ಕೆಡಿಪಿ ಸದಸ್ಯ ಪ್ರವೀಣ್ ಪೂಜಾರಿ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಫ್ರೆಂಡ್ಸ್ ಕ್ಲಬ್ ಹಾಗೂ ಭಾರತೀಯ ಅಂಚೆ ಇಲಾಖೆ ಜತೆಗೂಡಿ ಆಧಾರ್ ತಿದ್ದುಪಡಿ, ಆರೋಗ್ಯ ವಿಮೆ, ಅಪಘಾತ ವಿಮೆಯ ಪ್ರಯೋಜನವನ್ನು ಪಡೆಯಲು ಜನರಿರುವೆಡೆಗೆ ಸಾಗಿ ಅಂಚೆ ಇಲಾಖೆಯ ಯೋಜನೆಗಳನ್ನು ತಲುಪಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.


ಅಂಚೆ ಮಾರುಕಟ್ಟೆ ಇಲಾಖೆಯ ಕಾರ್ಯನಿರ್ವಾಹಕ ಸುಭಾಷ್ ಪಿ ಸಾಲ್ಯಾನ್ ಮಾತನಾಡಿ, ಕೇಂದ್ರ ಸರ್ಕಾರ ಬೇರೆ ಬೇರೆ ರೀತಿಯ ಯೋಜನೆಗಳನ್ನು ಅಂಚೆ ಇಲಾಖೆಯಲ್ಲಿ ಜಾರಿಗೆ ತಂದಿದೆ. ಆ ಎಲ್ಲಾ ಯೋಜನೆಗಳು ಒಂದೇ ಸೂರಿನಡಿಯಲ್ಲಿ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಹೆಚ್ಚಾಗಿ ಹಳ್ಳಿಗಳಲ್ಲಿ ಅಂಚೆ ಇಲಾಖೆಯ ಯೋಜನೆಗಳನ್ನು ಹಳ್ಳಿಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಗ್ರಾಮದ ಜನರು ಪ್ರಯೋಜನವನ್ನು ಪಡೆದುಕೊಂಡು ಉಳಿದವರಿಗೂ ಮಾಹಿತಿಯನ್ನು ನೀಡಿ ಎಂದರು.


ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ರಾಜೇಶ್ ಪೂಜಾರಿ ದೇವರಗುಡ್ಡೆ, ಹೊಸಬೆಟ್ಟು ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಕಾಳೂರು, ಇರುವೈಲು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷೆ ಸುಜಾತ ಜೆ ಶೆಟ್ಟಿ, ಸದಸ್ಯರಾದ ಪೂವಪ್ಪ ಸಾಲ್ಯಾನ್, ಪ್ರದೀಪ್ ಶೆಟ್ಟಿ, ದೀಪಾ ದಿನೇಶ್, ಯಶೋಧರ್ ಪೂಜಾರಿ ಕೆ, ದಿನೇಶ್ ಪಂಜ, ಕಿಶೋರ್ ಶೆಟ್ಟಿ, ಶೇಖರ್ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...