ಪ್ರಶಾಂತ್ ಪೂಜಾರಿ ಹತ್ಯೆಗೀಡಾಗಿ ಹತ್ತು ವರ್ಷ- ಮನೆಗೆ ನಳಿನ್ ಕುಮಾರ್ ಭೇಟಿ-ಅಕ್ಕಿ,ದಿನಸಿ ವಿತರಣೆ

Date:

ಮೂಡುಬಿದಿರೆ: ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಹತ್ತು ವರ್ಷಗಳಾಗಿದ್ದು ಹತ್ತನೇ ವರ್ಷದ ಸ್ಮರಣೆಯ ಅಂಗವಾಗಿ ಇಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲು ಪ್ರಶಾಂತ್ ಪೂಜಾರಿ ಮನೆಗೆ ಆಗಮಿಸಿ ಆತನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಮಾರು ಆರು ತಿಂಗಳಿಗೆ ಆಗುವಷ್ಟು ಅಕ್ಕಿ ಹಾಗೂ ದಿನಸಿ ಸಾಮಗ್ರಿಗಳನ್ನು ಕುಟುಂಬಕ್ಕೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಕೆಪಿ ಜಗದೀಶ್ ಅಧಿಕಾರಿ, ಗೋಪಾಲ್ ಶೆಟ್ಟಿಗಾರ್, ದಿವ್ಯವರ್ಮ ಬಳ್ಳಾಲ್, ಅಶ್ವತ್ ಪಣಪಿಲ, ಬಿರಾವು ಗ್ರಾಮ ಬಿಜೆಪಿ ಪ್ರಮುಖರಾದ ಬಾಲಕೃಷ್ಣ, ಬೂತ್ ಸಮಿತಿ ಅಧ್ಯಕ್ಷ ದಿವಾಕರ್, ಮೃತ ಪ್ರಶಾಂತ್ ಪೂಜಾರಿ ತಾಯಿ, ಸಹೋಹದರಿ ಸೇರಿದಂತೆ ಕುಟುಂಬಸ್ಥರು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...