- ಪಕ್ಷವು ಮುಂದಿನ ನವ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದೆ ; ಇಲ್ಯಾಸ್ ಮುಹಮ್ಮದ್ ತುಂಬೆ
ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ “ಬದಲಾವಣೆಗಾಗಿ ಸಂಕಲ್ಪ, ನ್ಯಾಯಕ್ಕಾಗಿ ಹೋರಾಟ” ಎಂಬ ಘೋಷವಾಕ್ಯದೊಂದಿಗೆ ಬೃಹತ್ ಪಕ್ಷ ಸಮಾವೇಶವು ಶನಿವಾರದಂದು ಪುತ್ತೂರಿನ ಪಡೀಲ್ನ ಕೋಟೆಚಾ ಹಾಲ್ನಲ್ಲಿ ಜರುಗಿತು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷದ ಬಲವರ್ಧನೆಯ ದೃಷ್ಟಿಯಿಂದ ಈ ಸಮಾವೇಶವು ಮಹತ್ವ ಪಡೆದುಕೊಂಡಿದೆ. ಸಮಾವೇಶದ ಅಧ್ಯಕ್ಷತೆಯನ್ನು ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಅವರು ಮಾತನಾಡಿ ‘SIR’ ವಿಚಾರದ ಬಗ್ಗೆ ಸವಿಸ್ತಾರವಾಗಿ ವಿಷಯ ಮಂಡನೆ ಮಾಡಿದರು. ಈ ವಿಷಯದ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು. ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಅವರು ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಎದುರಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಕರೆ ನೀಡಿದರು.

ಪಕ್ಷದ ಬಲವರ್ಧನೆಯ ಕುರಿತು ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎ. ಸಿದ್ದೀಕ್, ತಳಮಟ್ಟದಲ್ಲಿ ಸಂಘಟನೆಯನ್ನು ಗಟ್ಟಿಗೊಳಿಸುವ ಮೂಲಕ ಜನಸಾಮಾನ್ಯರ ಧ್ವನಿಯಾಗಬೇಕು ಎಂದರು. ಸಮಾವೇಶದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಡ್ವಕೇಟ್ ಅಶ್ರಫ್ ಅಗ್ನಾಡಿ ಅವರು ಸಮಾರೋಪ ಭಾಷಣ ಮಾಡಿದರು.

ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಸುಲೈಮಾನ್ ಬಿ.ಕೆ, ಕೋಶಾಧಿಕಾರಿ ಎಂ.ಎಚ್ ಸದ್ದಾಂ ಮುರ, ಸದಸ್ಯರಾದ ವಿಶ್ವನಾಥ ಪುಣ್ಚತ್ತಾರ್, ಮುಸ್ತಫಾ ಡಿ.ಬಿ, ಯಹ್ಯಾ ಕೂರ್ನಡ್ಕ, ಸಿರಾಜ್ ಎ.ಕೆ, ಇಸ್ಮಾಯಿಲ್ APMC, Adv.ಅಬ್ದುಲ್ ರಹಿಮಾನ್ ಹಾಗೂ ಪಕ್ಷದ ಮುಖಂಡರಾದ ಅಬ್ದುಲ್ ರಝಾಕ್ ಸೀಮಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಹಸಿವು ಮುಕ್ತ ಸ್ವಾತಂತ್ರ್ಯ ಮತ್ತು ಭಯ ಮುಕ್ತ ಸ್ವಾತಂತ್ರ್ಯ” ಎಂಬ ಆಶಯದೊಂದಿಗೆ ನಡೆದ ಈ ಸಮಾವೇಶದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕ್ಷೇತ್ರ ಕಾರ್ಯದರ್ಶಿ ಉಸ್ಮಾನ್ ಎ.ಕೆ ಅಥಿತಿಗಳನ್ನು ಸ್ವಾಗತಿಸಿದರು, ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.
ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ
ತಮ್ಮ ಅಧಿಕಾರವಧಿಯಲ್ಲಿ ಉತ್ತಮ ರೀತಿಯಲ್ಲಿ ಜನರ ಸೇವೆ ಮಾಡಿದ ಎಸ್.ಡಿ.ಪಿ.ಐ ಬೆಂಬಲಿತ 20 ಗ್ರಾಮ ಪಂಚಾಯತ್ ಸದಸ್ಯರಿಗೆ ಸಮಾವೇಶದಲ್ಲಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


