ಕಲ್ಲಡ್ಕ: ಗಣರಾಜ್ಯೋತ್ಸವದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಕಲ್ಲಡ್ಕ ಹಾಗೂ ಗೋಳ್ತಮಜಲ್ ಬ್ರಾಂಚ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ಗೌರವಪೂರ್ಣವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಾಂಚ್ ಅಧ್ಯಕ್ಷೆಯರಾದ ಹಬೀಬ ಹಾಗೂ ಮುತಾಝ್ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಮಹತ್ವವನ್ನು ಸಾರುವ ಸಂದೇಶ ನೀಡಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಫಾತಿಮಾ ನುಸೈಬಾ ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಭಾರತೀಯ ಸಂವಿಧಾನದ ಮಹತ್ವವನ್ನು ಪ್ರತಿಪಾದಿಸುವ ಭಿತ್ತಿಪತ್ರಗಳನ್ನು ಪ್ರ್ರದರ್ಶಿಸಲಾಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯೆ ಸುಮಯ್ಯ ಅವರು ಕಾರ್ಯಕ್ರಮ ನಿರೂಪಿಸಿದರು.



