ಸರಕಾರಿ ಅಧಿಕಾರಿಗಳ ಕೇಸರಿ ನಡಿಗೆ ಸಂವಿಧಾನ ವಿರೋಧಿ: ಎಸ್‌ಡಿಪಿಐ ಆಕ್ರೋಶ”

Date:

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರು ಸಂಘದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ಭಾಗವಹಿಸಿರುವುದನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸರಕಾರಿ ಅಧಿಕಾರಿಗಳು ಸಂವಿಧಾನಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು, ನಿರ್ದಿಷ್ಟ ಸಿದ್ಧಾಂತದ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೇಸರಿ ವಿವಾದಕ್ಕೆ ಎಡೆ ಮಾಡಿಕೊಡುವುದು ಸರಿಯಲ್ಲ. ಕರ್ತವ್ಯದ ವೇಳೆಯಲ್ಲಿ ಇಂತಹ ವೇದಿಕೆಗಳನ್ನು ಹಂಚಿಕೊಳ್ಳುವ ಮೂಲಕ ಅಧಿಕಾರಿಗಳು ತಮ್ಮ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಉಡುಪಿ ಜಿಲ್ಲಾಧಿಕಾರಿಗಳ ಧ್ವಜ ವಿವಾದದ ಬೆನ್ನಲ್ಲೇ ಬಂಟ್ವಾಳದಲ್ಲಿ ಇಂತಹ ಘಟನೆ ಮರುಕಳಿಸಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳು ಇಲಾಖೆಯ ಕೆಲಸಗಳನ್ನು ಸರಿಯಾಗಿ ನಿಭಾಯಿಸುವುದನ್ನು ಬಿಟ್ಟು ವಿವಾದಾತ್ಮಕ ನಡೆ ಅನುಸರಿಸುತ್ತಿರುವುದು ಖಂಡನೀಯ. ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಅಶ್ರಫ್ ತಲಪಾಡಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...