ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾಜಿಜ್ಞಾಸಾವೇದಿಹಿ: ಮಹಾಭಾರತ ಕಾರ್ಯಾಗಾರ ಮತ್ತು ಪ್ರಶಸ್ತಿ ಪ್ರದಾನ

Date:

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಪ್ರಜ್ಞಾಜಿಜ್ಞಾಸಾವೇದಿಹಿ ವೇದಿಕೆಯ ಸಹಯೋಗದಲ್ಲಿ ಮಹಾಭಾರತ ಕಾರ್ಯಾಗಾರ ಹಾಗೂ ರಾಮಾಯಣ-ಮಹಾಭಾರತ ಪರೀಕ್ಷೆಗಳ ಪ್ರಮಾಣಪತ್ರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಯಿತು.ಖ್ಯಾತ ಸಂಶೋಧಕ ಪ್ರೊ. ಗೋಪಾಲಕೃಷ್ಣ ನಾರಾಯಣ ಭಟ್ ಮಹಾಭಾರತದ ಆಳವಾದ ಅಂಶಗಳನ್ನು ವಿಶ್ಲೇಷಿಸಿ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಮಹಾಭಾರತವು ಕೇವಲ ಪೌರಾಣಿಕ ಕಾವ್ಯವಲ್ಲ, ಅದು ಮಾನವ ಜೀವನದ ಮಾರ್ಗದರ್ಶಕ ಗ್ರಂಥವಾಗಿದ್ದು, ಆತ್ಮಜ್ಞಾನ, ಧರ್ಮಾಚರಣೆ ಮತ್ತು ಸೌಹಾರ್ದಯುತ ಸಹಜೀವನದ ಪಾಠಗಳನ್ನು ನೀಡುತ್ತದೆ. ರಾಮಾಯಣ ಮತ್ತು ಮಹಾಭಾರತದಂತಹ ಪವಿತ್ರ ಗ್ರಂಥಗಳು ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವಂತ ಪಾಠಶಾಲೆಗಳು ಎಂದು ಅವರು ಉಲ್ಲೇಖಿಸಿದರು.

ಆಳ್ವಾಸ್ ಪ್ರೌಢಶಾಲೆಯ ಒಟ್ಟು 143 ವಿದ್ಯಾರ್ಥಿಗಳಿಗೆ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಡೆಸಿ, ಎಲ್ಲರೂ ಉತ್ತೀರ್ಣರಾಗಿ, 100% ಫಲಿತಾಂಶ ದಾಖಲಾಯಿತು. ಆಳ್ವಾಸ್ ಶಾಲೆಯ ಆಡಳಿತಾಧಿಕಾರಿ ಪ್ರೀತಂ ಕುಂದರ್ ದೀಪ ಪ್ರಜ್ವಲನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಭಟ್ ಗಾಳಿಮನೆ ಹಾಗೂ ಪ್ರೌಢಶಾಲೆ ಮತ್ತು ಪದವಿ ವಿಭಾಗದ ಬೋಧಕ ಸಿಬ್ಬಂದಿಗಳು ಇದ್ದರು. ಶ್ರಾವ್ಯ ಹಾಗೂ ಸ್ಪರ್ಷಾ ಕಾರ್ಯಕ್ರಮ ನಿರೂಪಿಸಿ, ಆಶ್ವಿಜಾ ವಂದಿಸಿ, ವಂಶಿಕಾ ಮತ್ತು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...