ಶಾಲಾ ಕಾಲೇಜುಗಳು ನಿರುದ್ಯೋಗ ಸೃಷ್ಟಿಸುವ ಕಾರ್ಖಾನೆಗಳಾಗಿವೆ -ಬಿ.ಕೆ ಇಮ್ತಿಯಾಜ್

Date:

ಉಳ್ಳಾಲ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಯುವಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ ಅದರ ಪರಿಣಾಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ವಿರಾಟ್ ಸ್ವರೂಪ ಪಡೆಯುತ್ತಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.

ಅವರು ಕುತ್ತಾರಿನಲ್ಲಿ ಜರಗಿದ ಇಂದು ಉಳ್ಳಾಲ ತಾಲೂಕಿನ ಕುತ್ತಾರು-ಬಟ್ಟೆದಡಿ ಘಟಕಗಳ ಸಮ್ಮೇಳನದ ಪ್ರತಿನಿಧಿ ಅಧಿವೇಶನ ಉದ್ಘಾಟಿಸಿ ಮಾತನಾಡುತ್ತಿದ್ದರು, ಮುಂದುವರಿದು ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರತಿವರ್ಷ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಸಾಲ ಮಾಡಿ ಪದವಿ ಪಡೆದು ಹೊರಬರುತ್ತಿದ್ದಾರೆ ಆದರೆ ಅವರ ಉದ್ಯೋಗ ಎಲ್ಲಿದೆ ಎಂಬ ಯುವಜನರ ಪ್ರಶ್ನೆಗೆ ಸರಕಾರ ಉತ್ತರಿಸುತ್ತಿಲ್ಲ. ಸರಕಾರದ ಯುವಜನ ವಿರೋಧಿ ನೀತಿ ಮತ್ತು ದೇಶದಲ್ಲಿ ಸೃಷ್ಟಿಸಲು ಸರಕಾರಗಳು ವಿಫಲ ಆಗಿರುವುದರಿಂದ ಇಂದು ಶಾಲಾ ಕಾಲೇಜುಗಳು ನಿರುದ್ಯೋಗಿಗಳ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಎಂದು ಅವರು ಟೀಕಿಸಿದರು.

ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷರಾದ ನವೀನ್ ಕೊಂಚಾಡಿ, ಉಳ್ಳಾಲ ತಾಲೂಕು ಅಧ್ಯಕ್ಷರಾದ ನ್ಯಾಯವಾದಿ ನಿತಿನ್ ಕುತ್ತಾರ್ ಮಾತನಾಡಿದರು. ಘಟಕ ಅಧ್ಯಕ್ಷರಾದ ಮಿಥುನ್ ರಾಜ್ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್ಐ ಜಿಲ್ಲಾ ಮುಖಂಡರಾದ ಜೀವನ್ ರಾಜ್ ಕುತ್ತಾರ್, ಸುನಿಲ್ ತೆವುಲ, ರಿಜ್ವಾನ್ ಹರೇಕಳ,ತುಷಾರ್ ಕಂಪ ಉಪಸ್ಥಿತರಿದ್ದರು.

ದಿವ್ಯಾರಾಜ್ ಸ್ವಾಗತಿಸಿ, ಕಿಶನ್ ಚಂದ್ರ ವಂದಿಸಿದರೆ,ವಿಕಾಸ್ ಕುತ್ತಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...