ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಹಲವು ಮಂದಿ ಪಕ್ಷಕ್ಕೆ ಸೇರ್ಪಡೆ

Date:

ಬಜ್ಪೆ: ಡಿಸೆಂಬರ್ 21 ರಂದು ನಡೆಯಲಿರುವ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಲಿಸಲು ತೀರ್ಮಾಣಿಸಿದ್ದು ಅಭ್ಯರ್ಥಿಗಳ ಮೊದಲು ಪಟ್ಟಿ ಬಿಡುಗಡೆ ಮಾಡಿದೆ. ಎಸ್ ಡಿ ಪಿ ಐ ಬಜ್ಪೆ ಪಟ್ಟಣ ಪಂಚಾಯತ್ ಸಮಿತಿ ಅಧ್ಯಕ್ಷ ಹಸೈನಾರ್ ಬಜ್ಪೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವಾರು ಮಂದಿಯನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದರೊಂದಿಗೆ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣಾ ಕಣಕ್ಕೆ ದುಮುಕಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ನಮ್ಮ ಪಕ್ಷದ ಚುನಾಯಿತ ಪ್ರತಿನಿಧಿಗಳ ಭ್ರಷ್ಟಾಚಾರ ರಹಿತ, ಅಭಿವೃದ್ಧಿ ಸೇವೆಗೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಾತಿ ಭೇದ ಮರೆತು ಜನ ಸೇವೆಯಲ್ಲಿ ತೊಡಗಿಸಿಕೊಂಡು ಅಭಿವೃದ್ಧಿಗೆ ವೇಗ ಹೆಚ್ಚಿಸಿರುವ ನಮ್ಮ ನಿಷ್ಠಾವಂತ ಸೇವೆ ಇತರ ರಾಜಕೀಯ ಪಕ್ಷಗಳಿಗೆ ಮಾದರಿಯಾಗಿದೆ. ಜನರ ಸೇವೆ, ವಾರ್ಡ್ ಗಳ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆಗೆ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಕಾರ್ಯಕರ್ತರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಭೆಯಲ್ಲಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ವಾರ್ಡ್ ಸಂಖ್ಯೆ 2 ಕಲ್ಲಝರಿ ವಾರ್ಡ್ ಗೆ ಮನ್ಸೂರ್ ಅಲಿ, ವಾರ್ಡ್ ಸಂಖ್ಯೆ 3 ಅಡ್ಕಬಾರೆ ವಾರ್ಡ್ ಅಭ್ಯರ್ಥಿಯಾಗಿ ಪರ್ವಿಝ್, ವಾರ್ಡ್ ಸಂಖ್ಯೆ 7 ತಾರಿಕಂಬ್ಲ ವಾರ್ಡ್ ಅಭ್ಯರ್ಥಿಯಾಗಿ ಆಯಿಷಾ, ವಾರ್ಡ್ ಸಂಖ್ಯೆ 10 ಮುಂಡಾರು ವಾರ್ಡ್ ಅಭ್ಯರ್ಥಿಯಾಗಿ ನಝೀರ್, ವಾರ್ಡ್ ಸಂಖ್ಯೆ 13 ಪೊರ್ಕೋಡಿ ವಾರ್ಡ್ ಅಭ್ಯರ್ಥಿಯಾಗಿ ಆರಿಫ್ ಪೊರ್ಕೊಡಿ ಯವರನ್ನು ಅಂತಿಮಗೊಳಿಸಿದೆ. ಇತರ ವಾರ್ಡ್ ಗಳಿಗೆ ಸಾಂಬಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರಿ ಮಾಡಲಾಗಿದ್ದು, ಕೂಡಲೇ ಅಂತಿಮಗೊಳಿಸಲಾಗುವುದು ಎಂದು ಮಂಗಳೂರು ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ ಹೇಳಿದರು.

ವೇದಿಕೆಯಲ್ಲಿ WIM ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲ ಜೋಕಟ್ಟೆ, ಉಪಾಧ್ಯಕ್ಷೆ ಆಯಿಷಾ ಬಜ್ಪೆ, , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ನಿಸಾರ್ ಮರವೂರು, ವಿಧಾನಸಭಾ ಕ್ಷೇತ್ರಾಧ್ಯಕ್ಷ ಇರ್ಷಾದ್ ಹಳೆಯಂಗಡಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಇರ್ಷಾದ್ ಬಜ್ಪೆ, ವಿಮೆನ್ ಇಂಡಿಯಾ ಮೂವ್ಮೆಂಟ್ ಕ್ಷೇತ್ರಾಧ್ಯಕ್ಷೆ ಫೌಝಿಯಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...