ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಮಂಗಳೂರಿಗೆ

Date:

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಏಪ್ರಿಲ್ 27ರಂದು ಸಂಜೆ 7 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಈಡಿ ದಾಖಲಿಸಿದ ಸುಳ್ಳು ಪ್ರಕರಣದ ಹಿನ್ನೆಲೆ ಅವರು 11 ತಿಂಗಳು ಜೈಲಿನಲ್ಲಿ ಇದ್ದು, ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಲ್ಲಿರುವ ಅವಧಿಯಲ್ಲೇ 2026–28ನೇ ಸಾಲಿಗೆ SDPI ರಾಷ್ಟ್ರೀಯ ಅಧ್ಯಕ್ಷರಾಗಿ ಅವರನ್ನು ಜನವರಿಯಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ಮರು ಆಯ್ಕೆ ಮಾಡಲಾಗಿತ್ತು.

ಅದ್ದೂರಿ ಸ್ವಾಗತಕ್ಕೆ ಸಿದ್ಧತೆ:
ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳೂರಿಗೆ ಅವರು ಇದೇ ಮೊದಲ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಲೀಡರ್ಸ್ ಕಾನ್ ಕ್ಲೇವ್:
ಏಪ್ರಿಲ್ 28ರಂದು ಸಂಜೆ 4 ಗಂಟೆಗೆ ಮಂಗಳೂರು ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ SDPI ನಾಯಕರ ಸಮಾವೇಶ (ಲೀಡರ್ಸ್ ಕಾನ್ ಕ್ಲೇವ್) ನಡೆಯಲಿದ್ದು, ಈ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇನ್ನಿತರ ಸಾರ್ವಜನಿಕ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅವರು ಏಪ್ರಿಲ್ 29ರಂದು ಉಡುಪಿಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶದಲ್ಲಿಯೂ ಅವರು ಪಾಲ್ಗೊಳ್ಳಲಿದ್ದಾರೆ.

ಅಧ್ಯಕ್ಷರ ಜೊತೆಯಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಮುಹಮ್ಮದ್ ಶಫಿ ರಾಜಸ್ಥಾನ್, ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಂಕಜಾಲ್, ರಿಯಾಝ್ ಫರಂಗಿಪೇಟೆ, ಇಲ್ಯಾಸ್ ಮುಹಮ್ಮದ್ ತುಂಬೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಸೇರಿದಂತೆ ರಾಜ್ಯ, ಜಿಲ್ಲಾ ನಾಯಕರ ಉಪಸ್ಥಿತಿಯೂ ಇರಲಿದೆ ಎಂದು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...