ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಯ 6ನೇ ರಾಷ್ಟ್ರೀಯ ಪ್ರತಿನಿಧಿ ಸಭೆ 2026 ರ ಜನವರಿ 20 ಮತ್ತು 21 ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಮಹತ್ವದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಭಾಗವಾಗಿ, ಕಾರ್ಯಕ್ರಮದ ಅಧಿಕೃತ ಲೋಗೋವನ್ನು ಇಂದು ನವದೆಹಲಿಯಲ್ಲಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಅನಾವರಣಗೊಳಿಸಲಾಯಿತು.

ಲೋಗೋವನ್ನು ಎಸ್ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷರಾದ ಅಡ್ವೊಕೇಟ್ ಶರಫುದ್ದೀನ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್, ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾ ಮೊಯ್ದಿನ್ ರವರು ಉಪಸ್ಥಿತರಿದ್ದರು.


