SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂಚರಿಸುತ್ತಿದ್ದ ಕಾರಿಗೆ ಬೆಂಕಿ: ಅಪಾಯದಿಂದ ಪಾರು

Date:


ಮಡಿಕೇರಿ: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಜೀದ್ ಕೊಡ್ಲಿಪೇಟೆ ಸಂಚರಿಸುತ್ತಿದ್ದ ಕಾರು ಬೆಂಕಿ ಹೊತ್ತಿ ಕಾರು ಭಸ್ಮವಾಗಿದೆ, ಮಜೀದ್ ಹಾಗೂ ಚಾಲಕ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ.

ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಪಕ್ಷದ ಸಂಘಟನಾ ಕಾರ್ಯದ ನಿಮಿತ್ತ ಉಡುಪಿ ಜಿಲ್ಲೆಯಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಕುಶಾಲನಗರ ಸಮೀಪದ ಆನೆಕಾಡು ಪ್ರದೇಶದ ಬಳಿ ಅನಿರೀಕ್ಷಿತ ಘಟನೆ ಸಂಭವಿಸಿದೆ.

ಅವರು ಪ್ರಯಾಣಿಸುತ್ತಿದ್ದ ಕ್ರೇಟಾ ಕಾರಿನ ಇಂಜಿನ್ ಮುಂಭಾಗದಲ್ಲಿ ಅಚಾನಕ್‌ವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅಪಾರ ಸಮಯಪ್ರಜ್ಞೆ ಮೆರೆದ ಕಾರಿನ ಚಾಲಕ ಸಮೀರ್ ಅವರು ತಕ್ಷಣವೇ ವಾಹನವನ್ನು ನಿಲ್ಲಿಸಿ, ಅಬ್ದುಲ್ ಮಜೀದ್ ಅವರನ್ನು ಸುರಕ್ಷಿತವಾಗಿ ಕಾರಿನಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ.

ಅವರು ಕಾರಿನಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ ಜ್ವಾಲಾಮುಖಿಯಂತೆ ಉರಿದು ಬೂದಿಯಾಗಿದೆ.

ಅದೃಷ್ಟವಶಾತ್, ಈ ಭೀಕರ ಘಟನೆಯಲ್ಲಿ ಅಬ್ದುಲ್ ಮಜೀದ್ ಮೈಸೂರು ಅವರು ಹಾಗೂ ಚಾಲಕ ಸಮೀರ್ ಇಬ್ಬರೂ ಯಾವುದೇ ಗಾಯ ಅಥವಾ ಅಪಾಯವಿಲ್ಲದೆ ಸಂಪೂರ್ಣ ಸುರಕ್ಷಿತರಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...