SDPI ಯುವ ಘಟಕ “YOUNG DEMOCRATS” ಅಸ್ತಿತ್ವಕ್ಕೆ

Date:

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಯುವ ಘಟಕ “YOUNG DEMOCRATS” ಚಾಲನೆ ನೀಡಲಾಗಿದೆ.ಎರಡು ದಿನಗಳ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಅಲ್ಲದೆ ಮುಂದಿನ ಮೂರು ವರ್ಷಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಆಯ್ಕೆ ಮಾಡಲಾಗಿದೆ. ಬಳಿಕ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷ ಮುಹಮ್ಮದ್ ಶಫಿ, ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ದೇಶದಲ್ಲಿ ಜನತೆಗೆ ಅಗತ್ಯದ ಆಹಾರ , ವಸತಿಗೆ ಸಂಬಂಧಿಸಿದ ಯಾವ ಯೋಜನೆಯನ್ನು ಜಾರಿ ಮಾಡುತ್ತಿಲ್ಲ. ಹಿಂದೂ- ಮುಸ್ಲಿಮರ ಮಧ್ಯೆ ವೈಷಮ್ಯ ಬೆಳೆಸಲು ಷಡ್ಯಂತ್ರ ನಡೆಯುತ್ತಿದ್ದು, ಇದೊಂದು ಮಾನವ ವಿರೋಧಿ ಸರಕಾರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ ಸಿಎಎ, ಎಸ್‌ಐಆರ್, ಬುಲ್ಡೋಜರ್, ಗುಂಪು ಹತ್ಯೆ ಇತ್ಯಾದಿಗಳು ಕೇವಲ ಅಲ್ಪಸಂಖ್ಯಾತ ಮುಸ್ಲಿಮರ ವಿರುದ್ಧದ ಸಮರ ಎಂದು ನಾವು ಭಾವಿಸಿದರೆ ಅದು ತಪ್ಪಾಗುತ್ತದೆ. ಇದರಿಂದ ಬುಡಕಟ್ಟು ಜನಾಂಗ, ಕೂಲಿ ಕಾರ್ಮಿಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಂದರೆಗೊಳಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರಕಾರವು ದೇಶದಲ್ಲಿ ಶ್ರೀಮಂತರಿಗೆ ಹೂಡಿಕೆ ಮಾಡಲು ಅನುಕೂಲ ಮಾಡಿಕೊಡುವ ಕಾರ್ಯಕ್ರಮ ಗಳನ್ನು ಅನುಷ್ಠಾನ ಮಾಡುತ್ತಿದೆ. ದೇಶದ ನೆಲ,ಜಲ, ಅರಣ್ಯವನ್ನು ಭಾರೀ ಪ್ರಮಾಣದಲ್ಲಿ ಶ್ರೀಮಂತ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡಿದೆ. ಇದರಿಂದ ದೇಶವು ಮತ್ತೆ ಗುಲಾಮಗಿರಿಗೆ ತಳ್ಳಲ್ಪಡುವ ಅಪಾಯ ಕಂಡು ಬಂದಿದೆ. ಇಂತಹ ಸಂದರ್ಭದಲ್ಲಿ ದೇಶವನ್ನು ರಕ್ಷಿಸಬೇಕಾದುದು ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ನುಡಿದರು.

ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಯುವ ಜನತೆ ರಾಜಕೀಯದಿಂದ ದೂರ ಹೋಗುತ್ತಾರೆ. ಬೇರೆ ಬೇರೆ ದಿಕ್ಕಿಗೆ ಹೋಗುವಂತವನ್ನು ಸಕ್ರಿಯವಾಗಿ ರಾಜಕೀಯವಾಗಿ ಪ್ರಭುತ್ವ ನೀಡುವ ದೃಷ್ಟಿಯಿಂದ “YOUNG DEMOCRATS” ಅಸ್ತಿತ್ವಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಮುಂಬರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಚುನಾವಣೆಯಲ್ಲಿ ಎಸ್‌ಡಿಪಿಐ ನಿರ್ಣಾಯಕ ಪಾತ್ರ ವಹಿಸಲಿದೆ. ಬಹುತೇಕ ವಾರ್ಡ್‌ಗಳಲ್ಲಿ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಆಯ್ಕೆಗೆ ತಯಾರಿ ನಡೆಸುತ್ತಿದೆ. ಮುಖ್ಯವಾಹಿನಿಯಲ್ಲಿರುವ ಎಲ್ಲ ಪಕ್ಷಗಳಿಗೂ ಸರಿಯಾದ ಸ್ಪರ್ಧೆ ನೀಡಲಿದೆ. ಸ್ಥಳೀಯವಾಗಿ ಜ್ವಲಂತ ಸಮಸ್ಯೆಗಳನ್ನು ಎತ್ತಿಕೊಂಡು ಜನರ ಬಳಿಗೆ ಎಸ್‌ಡಿಪಿಐ ತೆರಳಲಿದೆ ಎಂದರು.

ಎಸ್‌ಐಆರ್ ಮಾಪಿಂಗ್ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ಮುಖ್ಯವಾಗಿ ಎಸ್‌ಐಆರ್‌ ನಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ ಎಂದು ವಿವರಿಸಿದರು.ದೇಶದಲ್ಲಿ ಎಸ್‌ಐಆರ್‌ನಿಂದ ಮುಸ್ಲಿಂರಿಗೆ ಮಾತ್ರ ತೊಂದರೆಯಾಗುತ್ತದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಎಸ್‌ಐಆರ್‌ನಿಂದ ಬಡವರು, ವಲಸೆ ಕಾರ್ಮಿಕರು, ಮಹಿಳೆಯರಿಗೆ ತೊಂದರೆಯಾಗಲಿದೆ ಎಂದು ನುಡಿದರು.

ಎಸ್ ಡಿಪಿಐ ರಾಷ್ಟ್ರೀಯ ನಾಯಕ ಇಲ್ಯಾಸ್ ತುಂಬೆ ಮಾತನಾಡಿ, ಎಸ್‌ಡಿಪಿಐ ಒಂದು ರಾಜಕೀಯ ಪಕ್ಷ. ಇದನ್ನು ನಿಷೇಧ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ.ಮುಂದಿನ GBA, ಗ್ರಾಮ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...