
ಉಳ್ಳಾಲ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆ ಯಡಿ ಸೆ.3ರಿಂದ14 ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಷನ್ ಚಾರಿಟೇಬಲ್ ಟ್ರಸ್ಟ್ ಉಳ್ಳಾಲದ ಕಾರ್ಯದರ್ಶಿ ಅಹ್ಮದ್ ಶರೀಫ್ ಹೇಳಿದರು.ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವಾದಿ ಮುಹಮ್ಮದ್ (ಸ) ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು, ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು , ವಿವಿಧ ಧರ್ಮೀಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶ ಎಂದರು.ಈ ಕಾರ್ಯಕ್ರಮ ಪ್ರಯುಕ್ತ ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆ, ಪ್ರಬಂಧ ಸ್ಪರ್ಧೆ, ಮುಸ್ಲಿಮ್ ಮುಖಂಡರ ಸಭೆ, ಜಿಲ್ಲಾ ಸಮಾವೇಶ,ದೇಶ ಬಾಂಧವರೊಂದಿಗೆ ವಿಚಾರ ವಿನಿಮಯ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಈ ಸಂದರ್ಭದಲ್ಲಿ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.ಸುದ್ದಿ ಗೋಷ್ಠಿ ಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಸ್ಥಾನೀಯ ಅಧ್ಯಕ್ಷ ಆರ್.ಕೆ.ಅಬ್ದುಲ್ ಮಜೀದ್, ಉಪಾಧ್ಯಕ್ಷ ಮುಝಮ್ಮಿಲ್ ಅಹ್ಮದ್, ಸಂಚಾಲಕಿ ಹಫ್ಸಾ ಶಮೀರ ಮುಸ್ತಕೀಮ್ ಅರೆಬಿಕ್ ಇನ್ಸ್ಟಿಟ್ಯೂಟ್ ಸಂಚಾಲಕ ಅಬ್ದುಲ್ ರಹೀಮ್, ಇಸ್ಹಾಕ್ ಹಸನ್,ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ಜಿಲ್ಲಾ ಕಾರ್ಯದರ್ಶಿ ನಿಝಾಮುದ್ದೀನ್ ಉಪಸ್ಥಿತರಿದ್ದರು.