ಡಿ. 20ರಂದು ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ “ಸ್ಪೂತಿ೯ ರತ್ನ” ಪ್ರಶಸ್ತಿ ಪ್ರದಾನ

Date:

ಮೂಡುಬಿದಿರೆ : ತಾಲೂಕಿನ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಡಿ.20 ರಂದು ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ ಅವರಿಗೆ ‘ಸ್ಪೂರ್ತಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಸ್ಥಾಪಕ ಪ್ರಕಾಶ್ ಜೆ. ಶೆಟ್ಟಿಗಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಳುವಾಯಿ ಪಂಚಾಯತ್ ಅಧ್ಯಕ್ಷ ಸುರೇಶ್ ಗೋಳಾರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಮಾಜಿ ಸಚಿವ ಅಭಯಚಂದ್ರ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ಮುಖಂಡ ಸುದರ್ಶನ ಎಂ, ಅಮರಶ್ರೀ ಶೆಟ್ಟಿ ಸಹಿತ ಹಲವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಾಯ್ಸ್ ಆಫ್ ಆರಾಧನಾ ತಂಡದ ಮಕ್ಕಳಿಂದ ಹಾಗೂ ಸ್ಪೂರ್ತಿ ಶಾಲಾ ವಿಶೇಷ ಚೇತನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...