ಶಾರ್ಜಾ ರಸ್ತೆ ಅಪಘಾತ: ಮೂಡಬಿದಿರೆ ಮೂಲದ ಐದು ವರ್ಷದ ಬಾಲಕಿ ಮೃತ್ಯು

Date:

ಮೂಡಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ.

ಶಾರ್ಜಾದಲ್ಲೇ ಉದ್ಯೋಗದಲ್ಲಿರುವ.ಹಕೀಮ್ ಹಕೀಂ ಕುಟುಂಬದೊಂದಿಗೆ ವಾಸವಾಗಿದ್ದು, ರವಿವಾರ ರಾತ್ರಿ ಶಾಪಿಂಗ್ ಮುಗಿಸಿ ತಮ್ಮ ಕಾರಿನಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಜೂನ್ 2ರಂದು ಐದು ವರ್ಷ ತುಂಬಬೇಕಿದ್ದ ಅನಿಹಾಳ ವೀಸಾ ಅವಧಿಯೂ ಅದೇ ದಿನ ದಿನ ಮುಗಿಯಬೇಕಾಗಿತ್ತು ಎಂಬುದು ಇನ್ನಷ್ಟು ‌ ಬೇಸರದ ಸಂಗತಿ. ಕುಟುಂಬದಲ್ಲಿ ಮೂವರು ಗಂಡು ಮಕ್ಕಳಿದ್ದು, ಈಕೆ ಏಕೈಕ ಪುತ್ರಿಯಾಗಿದ್ದಳು. ಬಾಲಕಿಯ ಅಂತ್ಯಕ್ರಿಯೆ ಶಾರ್ಜಾದಲ್ಲೇ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...