ಶಿರ್ವ: ಹಸುವಿನ ರುಂಡ ಪತ್ತೆ ಪ್ರಕರಣ: ಆರೋಪಿಯ ಬಂಧನ…!!

Date:

ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಗ್ರಾಮದ ಪಾಪನಾಶಿನಿ ಹೊಳೆಯ ಬದಿ ಜಾನುವಾರಿನ ಅವಶೇಷಗಳ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಿರ್ವದ ನಿವಾಸಿ ಆಶೋಕ ಎಂದು ತಿಳಿದು ಬಂದಿದೆ.

ಪ್ರಕರಣದ ವಿವರ: ದಿನಾಂಕ 01.06.2026 ರಂದು ಕಾಪು ತಾಲೂಕು ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗೆ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಇರುವ ಬಗ್ಗೆ ಮಾಹಿತಿಯ ಮೇರೆಗೆ ಶಿರ್ವ ಪೊಲೀಸ್‌ ಠಾಣಾ ಪಿಎಸ್‌ಐ ಮಂಜುನಾಥ ಮರಬದ ಇವರು ಸಹಾಯಕ ನಿರ್ದೇಶಕರು ಪಶು ವೈದ್ಯಕೀಯ ಆಸ್ಪತ್ರೆ ಕಾಪು ಹಾಗೂ ಜಿಲ್ಲಾ ಅಪರಾದ ಪರಿಶೀಲನಾ ಅಧಿಕಾರಿಗಳ ಸಮಕ್ಷಮ ಮಹಜರು ಮುಖೇನ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು ಮತ್ತು ಮಾಂಸ, ಹೊಟ್ಟೆಯ ಒಳಗಿನ ಭಾಗಗಳನ್ನು ಸ್ಥಳದಿಂದ ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 51/2026 ಕಲಂ: 4, 12 The Karnataka Prevention of slaughter and preservation of cattle Act 2020 ನಂತೆ ಪ್ರಕರಣ ದಾಖಲಾಗಿರುತ್ತದೆ.

ಸದರಿ ಪ್ರಕರಣದಲ್ಲಿ ಜಾನುವಾರನ್ನು ಕಡಿದು ಮಾಂಸ ಮಾಡಿ ಅವಶೇಷಗಳನ್ನು ಹೊಳೆಗೆ ಎಸೆದ ಆರೋಪಿ ಅಶೋಕ, ಪ್ರಾಯ: 52 ವರ್ಷ, ತಂದೆ: ದಿ: ಚಿಂಗ ಕೊರಗ, ವಾಸ: ಶಿರ್ವ ಪದವು, ಬಬ್ಬು ಸ್ವಾಮಿ ದೈವಸ್ಥಾನದ ಹತ್ತಿರ, ಪದವು, ಶಿರ್ವ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬಾತನನ್ನು ಈ ದಿನ ದಿನಾಂಕ 05.06.2026 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ದಸ್ತಗಿರಿ ಮಾಡಿ ಆರೋಪಿಯು ತನ್ನ ವಶದಲ್ಲಿ ಇಟ್ಟುಕೊಂಡಿದ್ದ ಜಾನುವಾರಿನ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ ಅಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕರಾದ ವಿಜಯ ಪ್ರಸಾದ್‌ ಹಾಗೂ ಅಝಮತ್‌ ಆಲಿ ಪೊಲೀಸ್‌ ವೃತ್ತ ನಿರೀಕ್ಷಕರು ಕಾಪು ವೃತ್ತ ರವರ ನೇತ್ರತ್ವದಲ್ಲಿ ಶಿರ್ವ ಠಾಣಾ ಉಪ ನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್, ಶಿರ್ವ ಪೊಲೀಸ್‌ ಠಾಣಾ ಸಿಬ್ಬಂದಿಯವರಾದ ಮಂಜುನಾಥ ಅಡಿಗ, ಕಿರಣ್‌, ಯಲ್ಲಾಲಿಂಗ, ಕಾಪು ಪೊಲೀಸ್‌ ಠಾಣೆಯ ರಘು ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ಸಿಬ್ಬಂದಿಯವರಾದ ರಹಿಮಾನ್‌, ಸಂದೇಶ್‌ ರವರು ಪತ್ತೆ ಕಾರ್ಯಾಚರಣೆ ನಡೆಸಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...