ಶಿವಮೊಗ್ಗ| ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಎಸ್ಐ ಮಾಂಗಲ್ಯ ಸರ ಕಳವು: ಕಣ್ಣೀರಿಟ್ಟ ಅಧಿಕಾರಿ, ಕದ್ದವರು ಯಾರು?

Date:

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಎಸ್‌ಐ ಅಮೃತಾ ಅವರು ಪ್ರತಿಭಟನಾಕಾರರನ್ನು ಬಂಧಿಸುವ ವೇಳೆ ಈ ಘಟನೆ ನಡೆದಿದೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಬಂದೋಬಸ್ತ್‌ನಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಆಗಿರುವ ಅಮೃತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದು ತಿಳಿಯುತ್ತಿದ್ದಂತೆಯೇ ಎಎಸ್‌ಐ ಅಮೃತಾ ಅವರು ಸ್ಥಳದಲ್ಲೇ ಕಣ್ಣೀರು ಹಾಕಿದ ಘಟನೆ ನಡೆಯಿತು. ಕರ್ತವ್ಯ ನಿರತ ಅಧಿಕಾರಿಯೊಬ್ಬರ ಸರವೇ ಕಳುವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳಿಗೆ ಭಾರೀ ಮುಜುಗರ ಹಾಗೂ ಆತಂಕ ತಂದಿದೆ. ಕೂಡಲೇ ಸ್ಥಳದಲ್ಲಿದ್ದ ಇತರೆ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಪ್ರತಿಭಟನೆಯ ವೇಳೆ ಸೆರೆಹಿಡಿಯಲಾದ ವಿಡಿಯೋ ತುಣುಕುಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಕಾಂಗ್ರೆಸ್ ಪ್ರತಿಭಟನೆಯ ಗದ್ದಲದ ನಡುವೆ ಈ ದುಷ್ಕೃತ್ಯ ಎಸಗಿದವರು ಯಾರು ಎಂಬುದು ಪೊಲೀಸರ ತನಿಖೆಯಿಂದಲೇ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಸ್.ಡಿ.ಪಿ.ಐ ಉಡುಪಿ ಜಿಲ್ಲೆ ವತಿಯಿಂದ SIR ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ

ಎಸ್.ಡಿ.ಪಿ.ಐ ಉಡುಪಿ ಜಿಲ್ಲೆ ವತಿಯಿಂದ SIR ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ ಉಡುಪಿ:...

ಬಜ್ಪೆ ಪಟ್ಟಣ ಪಂಚಾಯತ್: ಖಾತೆ ತೆರೆದ ಎಸ್‌ಡಿಪಿಐ

ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,...

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...