IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರೆದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

Date:

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ DGP ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ, “30 ನಿಮಿಷ ಸಮಯ ನೀಡಿದರೆ IPS ಅಧಿಕಾರಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲು ಮಾಡುತ್ತೇನೆ” ಎಂದು SP ಕಾಶಿನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. DGP ಅವರಿಗೆ ಬರೆದಿರುವ ಪತ್ರದಲ್ಲಿ ಮಾನಸಿಕ ಕಿರುಕುಳ ಮತ್ತು ತಾರತಮ್ಯ ಆರೋಪಗಳನ್ನು ಉಲ್ಲೇಖಿಸಿರುವ ಅವರು, ತನ್ನ ಮೇಲೆ ಅನ್ಯಾಯವಾಗುತ್ತಿರುವುದಾಗಿ ದೂರಿದ್ದಾರೆ.

SP ಅವರ ಪ್ರಕಾರ, “ಅವರು ಹೇಳಿದಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ವಿಶೇಷವಾಗಿ ಕರ್ನಾಟಕದ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ಈಗಾಗಲೇ ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ, ಈ ವಿಷಯವನ್ನು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಗಮನಕ್ಕೂ ತರಬೇಕು ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ಹಿನ್ನಲೆಯಲ್ಲಿ, ಒಂದು ವಾರದೊಳಗೆ ತಮ್ಮನ್ನು ಭೇಟಿ ಮಾಡಲು ಅವಕಾಶ ಕಲ್ಪಿಸುವಂತೆ DGP ಅವರನ್ನು ವಿನಂತಿಸಿರುವ SP, ಮುಕ್ತವಾಗಿ ಮಾತನಾಡಿ ಸತ್ಯಾಂಶವನ್ನು ಬಯಲು ಮಾಡುವ ಉದ್ದೇಶ ಹೊಂದಿದ್ದಾರೆ.

ಈ ಘಟನೆ ರಾಜ್ಯ ಪೊಲೀಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...