ಎಸ್ಡಿಪಿಐ ಮಂಗಳೂರು ಕ್ಷೇತ್ರ ನಾಯಕರ ವಿಶೇಷ ಸಭೆ: ರಾಷ್ಟ್ರೀಯ ನಾಯಕರಾದ ಇಲ್ಯಾಸ್ ತುಂಬೆ, ರಿಯಾಝ್ ಫರಂಗೀಪೇಟೆ ಭಾಗಿ.

Date:

ಉಳ್ಳಾಲ : ನ21 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ( ಉಳ್ಳಾಲ ) ವಿಧಾನ ಸಭಾ ಕ್ಷೇತ್ರ ಸಮಿತಿಯ ನಾಯಕರುಗಳ ವಿಶೇಷ ಸಭೆಯು ದೇರಳಕಟ್ಟೆಕಟ್ಟೆಯ ಪಕ್ಷದ ಕ್ಷೇತ್ರ ಸಮಿತಿ ಕಚೇರಿಯಲ್ಲಿ ಮಂಗಳೂರು ಕ್ಷೇತ್ರಾಧ್ಯಕ್ಷರಾದ ಝಾಹಿದ್ ಮಲಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್‌ ತುಂಬೆ ಸಭೆಯನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ತಂತ್ರಗಳ ಕುರಿತು ಹಾಗೂ ಪಕ್ಷದ ಬಲವರ್ಧನೆಯ ಅಗತ್ಯತೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗೀಪೇಟೆ ಸಭೆಯನ್ನು ಉದ್ದೇಶಿಸಿ ಬೂತ್ ಮಟ್ಟದಿಂದಲೇ ಚುನಾವಣೆ ಸಿದ್ದತೆ ಪ್ರಾರಂಭಿಸಿ ಮುಂದಿನ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಪ್ರತಿನಿಧಿಗಳನ್ನು ಇಮ್ಮಡಿ ಗೊಳಿಸಲು ಈಗಲೇ ಕಾರ್ಯ ಪ್ರವರ್ತರಾಗಲು ಕರೆ ನೀಡಿದರು.

ಸಭೆಯಲ್ಲಿ ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ,ಕ್ಷೇತ್ರ ಉಸ್ತುವಾರಿ ಜಮಾಲ್ ಜೋಕಟ್ಟೆ ಜಿಲ್ಲಾ ಸಮಿತಿ ಸದಸ್ಯರುಗಳಾದ ನಝೀರ್ ಪುದು,ಲತೀಫು ಕಲ್ಲಾಪು ಹಾಗೂ ಕ್ಷೇತ್ರ ಸಮಿತಿಯ ನಾಯಕರು, ಬ್ಲಾಕ್ ಮಟ್ಟದ ಗ್ರಾಮ ಮಟ್ಟದ ನಾಯಕರು ಪಾಲ್ಗೊಂಡಿದ್ದರು.
ಸಭೆಯಲ್ಲಿ ವಿಶೇಷವಾಗಿ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಕ್ವಾಂಡೋ ಚಾಂಪಿಯನ್ ಶಿಪ್-2025 ರ ಪಂದ್ಯಾವಳಿಯಲ್ಲಿ ಚಿನ್ನದ ಪದಕ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಸ್ವಾಗತಿಸಿ , ಕ್ಷೇತ್ರ ಜೊತೆ ಕಾರ್ಯದರ್ಶಿ ಆರೀಫ್ ರವರು ಧನ್ಯವಾದಗೈದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...