ರಾಜ್ಯಮಟ್ಟದ ಮಲ್ಲಕಂಬ ಸ್ಪಧೆ೯: ಆಳ್ವಾಸ್ ಗೆ ತಂಡ ಪ್ರಶಸ್ತಿ

Date:

ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಒಟ್ಟು 9 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಫಲಿತಾಂಶ:14 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಗೌರೀಶ್ ಎಂ ಕೆ – ದ್ವಿತೀಯ ಸ್ಥಾನ, ಭೀಮಪ್ಪ ಎಂ ಜಿ ತೃತೀಯ ಸ್ಥಾನ, ಪ್ರೀತಮ್ ಜಿ – ನಾಲ್ಕನೇ ಸ್ಥಾನ,

14 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ: ವರ್ಷಿಣಿ ಎಂ ಕೆ ನಾಲ್ಕನೇ ಸ್ಥಾನ,

17 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಪ್ರಜ್ವಲ್ ಎಂ ಐ ದ್ವಿತೀಯ ಸ್ಥಾನ, ಸಾಬು ಬಿ ಎಂ – ತೃತೀಯ ಸ್ಥಾನ, ಗಜಾನಂದ್ ಎಚ್ ಸಿ – ನಾಲ್ಕನೇ ಸ್ಥಾನ,

17 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ: ದಿವ್ಯಾ ಜೆ ಪಿ ತೃತೀಯ ಸ್ಥಾನ, ಪೂಜಾ ವಿ – ನಾಲ್ಕನೇ ಸ್ಥಾನ ಪಡೆದಿದ್ದಾರೆ.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...