ಶಿವಮೊಗ್ಗ: ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ಬೃಹತ್ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಮೂಡುಬಿದಿರೆ ತಾಲೂಕಿನ ಪಣಪಿಲ ಗ್ರಾಮದ ರಾಜೇಶ್ ಕೋಟ್ಯಾನ್ ಅವರು ಉತ್ತಮ ಪ್ರಗತಿಪರ ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಧುನಿಕ ವಿಧಾನದಲ್ಲಿ ಮೀನು ಸಾಗಾಣಿಕೆ, ಪ್ರಗತಿಪರ ಕೃಷಿಯಲ್ಲಿ ಅವರು ಮಾಡಿದ ಮಹತ್ವದ ಸಾಧನೆ ಮತ್ತು ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಶುಕ್ರವಾರದಂದು ನಡೆದ ಕೃಷಿ ಮೇಳದ ಸಮಾರಂಭದಲ್ಲಿ ರಾಜೇಶ್ ಕೋಟ್ಯಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಕೃಷಿ ಮೇಳವನ್ನು ಕೆಳದಿ ಶಿವಪ್ಪ ನಾಯಕ ಕೃಷಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ನ ಸಹಯೋಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದವು.


