ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

Date:

6 ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದು ಚಾಂಪಿಯನ್ ಪಟ್ಟ

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್ ಪುರುಷರು ಮತ್ತು ಸೀನಿಯರ್ ಮಹಿಳೆಯರ ವಿಭಾಗಗಳಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡರು.

ವೈಯಕ್ತಿಕ ಪ್ರಶಸ್ತಿಗಳ ಗರಿ:
ಸಬ್ ಜೂನಿಯರ್ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‌ನ ಮಾನಸ ಅವರು ‘ಬೆಸ್ಟ್ ಲಿಫ್ಟರ್’ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ಅದೇ ರೀತಿ, ಮಹಿಳಾ ವಿಭಾಗದಲ್ಲಿ ಆಳ್ವಾಸ್‌ನ ತನುಷ ಸಹ ‘ಬೆಸ್ಟ್ ಲಿಫ್ಟರ್’ ವೈಯಕ್ತಿಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.


ಈ ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಪಂದ್ಯಾವಳಿಯನ್ನು ಕರ್ನಾಟಕ ರಾಜ್ಯ ವೇಯ್ಟ್‌ಲಿಫ್ಟಿಂಗ್ ಅಸೋಸಿಯೇಷನ್ ಮತ್ತು ಸ್ಪೋರ್ಟ್ಸ್‌ ಎಂಡ್ ಆರ್ಟ್ಸ್ ಅಸೋಸಿಯೇಷನ್ ಸುಳ್ಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...