ಹದಗೆಟ್ಟ ರಸ್ತೆ ತಕ್ಷಣ ದುರಸ್ತಿಗೊಳಿಸಲು: SDTU ಮುಲ್ಕಿ ತಾಲೂಕು ಸಮಿತಿ ಆಗ್ರಹ

Date:

ಮುಲ್ಕಿ, ಆ. 5: ಕೆ.ಎಸ್ ರಾವ್ ನಗರ ಬಸ್ ತಂಗುದಾಣದಿಂದ ರೈಲು ನಿಲ್ದಾಣದ ಹಾದಿಯಾಗಿ ಮೂಡಬಿದ್ರೆಗೆ ಸಾಗುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು, ಪಾದಚಾರಿಗಳು ಹಾಗೂ ಕಾರ್ಮಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆ ಗುಂಡಿಗಳಿಂದ ಕೂಡಿದ್ದು, ನೀರು ನಿಂತು ಅಪಘಾತಗಳ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮುಲ್ಕಿ ತಾಲೂಕು ಸಮಿತಿ ವತಿಯಿಂದ ಇಂದು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ಈ ರಸ್ತೆ ಮೂಲಕ ಪ್ರತಿದಿನ ಸಾವಿರಾರು ಸಾರ್ವಜನಿಕರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ರೈಲು ಪ್ರಯಾಣಿಕರು ಸಂಚರಿಸುತ್ತಿದ್ದು, ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿ ರಸ್ತೆಯನ್ನು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ SDTU ಮುಲ್ಕಿ ತಾಲೂಕು ಸಮಿತಿಯ ಅಧ್ಯಕ್ಷ ವಿಶುಕುಮಾರ್, ಜಿಲ್ಲಾ ಸಮಿತಿ ಸದಸ್ಯ ರಹೀಂ ಮುಲ್ಕಿ ಉಪಾಧ್ಯಕ್ಷ ರಾಜ್ ಮಹಮ್ಮದ್, ಕಾರ್ಯದರ್ಶಿ ಸಾಹಲಂ, ಕೋಶಾಧಿಕಾರಿ ಮನ್ಸೂರ್ ಹಾಗೂ ಸದಸ್ಯರಾದ ಅಬ್ಝಲ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...