ಕಂಬಳದಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ ರದ್ದು

Date:

ಮೂಡುಬಿದಿರೆ: ಅವಿಭಜಿತ ಜಿಲ್ಲೆಗಳಲ್ಲಿ ನಡೆಯುವ ಕಂಬಳಗಳಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ಗಳನ್ನು ರದ್ದುಗೊಳಿಸಲಾಗಿದೆ.

ಇದರಿಂದಾಗಿ ಕಳೆದ 15 ವರ್ಷಗಳಿಂದ ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಿದ್ದ ಪಣಪಿಲ ಕಂಬಳದಲ್ಲಿ ಈ ಬಾರಿ ‘ಸಬ್ ಜೂನಿಯರ್’ ವಿಭಾಗದ ಸ್ಪರ್ಧೆ ಮೊಟಕುಗೊಂಡಿದೆ. ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಬಂದಿರುವ ಆದೇಶದ ಮೇರೆಗೆ ಕಾನೂನಿನ ತೊಡಕಿನ ಕಾರಣದಿಂದ ಈ ವಿಭಾಗವನ್ನು ರದ್ದುಗೊಳಿಸಲಾಗಿದೆ ಎಂದು ಪಣಪಿಲ ಕಂಬಳ ಸಮಿತಿ ತಿಳಿಸಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಅಶ್ವಥ್ ಪಣಪಿಲ ಮಾಹಿತಿ ನೀಡಿದ್ದು, ಈ ವರ್ಷ ನೇಗಿಲು ಕಿರಿಯ ಸೇರ್ಪಡೆಗೊಳಿಸಲಾಗಿದೆ. ಉಳಿದಂತೆ ಹಗ್ಗ ಕಿರಿಯ, ಮತ್ತು ವಿಶೇಷವಾಗಿ ನೇಗಿಲು ಹಿರಿಯ ವಿಭಾಗಗಳ ಸ್ಪರ್ಧೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಪಾಲನೆಯ ದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಂಬಳಾಭಿಮಾನಿಗಳು ಹಾಗೂ ಕೋಣಗಳ ಯಜಮಾನರು ಸಮಿತಿಯ ನಿರ್ಧಾರಕ್ಕೆ ಸಹಕರಿಸಬೇಕೆಂದು ಸಮಿತಿ ವಿನಂತಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...