ಸುಳ್ಯ ಶಾಸಕಿ ಭಾಗೀರಥಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆದಿದ್ರಾವಿಡ ಸಮಾಜ ಹಾಗೂ ಬಿಜೆಪಿ ಎಸ್.ಸಿ ಮೋರ್ಚಾ ಖಂಡನೆ

Date:

ಮೂಡುಬಿದಿರೆ: ಸುಳ್ಯ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ‘ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆಯುವ ಮೂಲಕ ನಡೆಸಿದ ಅವಹೇಳನಕಾರಿ ಕೃತ್ಯವನ್ನು ಆದಿದ್ರಾವಿಡ ಸಮಾಜ ಹಾಗೂ ಬಿಜೆಪಿ ಎಸ್.ಸಿ ಮೋರ್ಚಾ ತೀವ್ರವಾಗಿ ಖಂಡಿಸಿದೆ.

ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಶೀನಾ ಮಾಸ್ತಿಕಟ್ಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿರುವ ಯಾರೊಬ್ಬರೂ ಇಂತಹ ನೀಚ ಕೃತ್ಯ ಎಸಗಲು ಸಾಧ್ಯವಿಲ್ಲ. ಇಂದು ಒಂದು ಜೀವ ಉಳಿಸಲು ಜಾತಿ-ಮತ ಭೇದ ಮರೆತು ಜೀರೋ ಟ್ರಾಫಿಕ್ ಮೂಲಕ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಮಾನವೀಯ ಸಂಸ್ಕೃತಿ ನಮ್ಮದು. ಹಾಗಿರುವಾಗ, ಸುಳ್ಳು ಸುದ್ದಿ ಹರಡಿ ಶಾಸಕಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರುವುದು ಅತ್ಯಂತ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ಕುಕೃತ್ಯವು ಕೇವಲ ವ್ಯಕ್ತಿಯೊಬ್ಬರ ತೇಜೋವಧೆಯಲ್ಲದೆ, ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಪೊಲೀಸರು ತಕ್ಷಣವೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ಆರೋಪಿಯನ್ನು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷದ ಅಥವಾ ಸಮಾಜದ ವ್ಯಕ್ತಿಗಳ ವಿರುದ್ಧ ಇಂತಹ ಅಮಾನವೀಯ ಕೃತ್ಯ ನಡೆಯದಂತೆ ಘನ ನ್ಯಾಯಾಲಯವು ಈ ಪ್ರಕರಣದಲ್ಲಿ ಸಹಾನುಭೂತಿ ತೋರಿಸದೆ ಮಾದರಿ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಲಾಯಿತು.

ಮೋರ್ಚಾದ ಮೂಡುಬಿದಿರೆ ಮಂಡಲದ ಕಾರ್ಯದರ್ಶಿ ರಾಜು ದರೆಗುಡ್ಡೆ, ಮುಖಂಡರಾದ ಜಯಕುಮಾರ್ ಬೆಳುವಾಯಿ, ಸತೀಶ್ ನಲ್ಕೆಮಾರ್, ತಿಮ್ಮಪ್ಪ ಮಾಸ್ತಿಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...