ತೆಂಕಮಿಜಾರು ಗ್ರಾ. ಪಂ. ಮಾಜಿ ಅಧ್ಯಕ್ಷ ವರ್ಕು ಶಂಕರ ರಾವ್ ನಿಧನ

Date:


ಮೂಡುಬಿದಿರೆ: ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಆಡಳಿತ ಸಮಿತಿ ಮಾಜಿ ಸದಸ್ಯ, ಮಂಜನಬೈಲು ಶ್ರೀ ಭವಾನಿಶಂಕರ ಭಜನಾ ಮಂಡಳಿ ಅಧ್ಯಕ್ಷ, ತೆಂಕಮಿಜಾರು ಗ್ರಾ.ಪಂ. ಮಾಜಿ ಅಧ್ಯಕ್ಷ ವರ್ಕು ಶಂಕರ ರಾವ್ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.


ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಕಲ್ಲಮುಂಡ್ಕೂರು ಮಂಡಲ ಪಂಚಾಯತ್ ಸದಸ್ಯ, ಕಲಾನಿಧಿ ಸಹಕಾರ ಸಂಘದ ನಿರ್ದೇಶಕ, ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರ ಸಂಘದ ನಾಮನಿರ್ದೇಶಿತ ಸದಸ್ಯರಾಗಿದ್ದರು. ಭಜನಾ ಕಲಾವಿದರಾಗಿ ಜನಮೆಚ್ಚುಗೆ ಪಡೆದಿದ್ದ ಅವರ ಭಜನೆಗಳ ಪ್ರಸ್ತುತಿ ಆಪ್ಯಾಯಮಾನವಾಗಿತ್ತು. ಮೃತರಿಗೆ ಮೂವರು ಗಂಡು ಹಾಗೂ ಒಬ್ಬಾಕೆ ಪುತ್ರಿ ಇದ್ದಾರೆ.

ಸಂತಾಪ:
ವರ್ಕು ಶಂಕರ ರಾವ್ ನಿಧನಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್, ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣಮೂರ್ತಿ ವಿ.ಎ., ಮಂಜನಬೈಲು ಶ್ರೀ ಭವಾನಿ ಶಂಕರ ಭಜನಾ ಮಂಡಳಿ ಕಾರ್ಯದರ್ಶಿ ಬಾಲಕೃಷ್ಣ ರಾವ್, ಅಶ್ವತ್ಥಪುರ ‌ಕಲಾನಿಧಿ ಸಹಕಾರ ಸಂಘದ ಅಧ್ಯಕ್ಷ ರಘುನಾಥ ಎಲ್.ವಿ. ಮೊದಲಾದವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...