ಇಂದು ಮೂಡಬಿದಿರೆಯಲ್ಲಿ 23ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

Date:

ಮೂಡುಬಿದಿರೆ : ಶಾಸಕ ಉಮಾನಾಥ ಎ. ಕೋಟ್ಯಾನ್ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ “ಕೋಟಿ-ಚೆನ್ನಯ” ಕಂಬಳೋತ್ಸವವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.

ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ವೇ. ಮೂ.ಈಶ್ವರ ಭಟ್, ಆಲಂಗಾರು ಚಚ್೯ನ ಧಮ೯ಗುರು । ಫಾ। ಮೆಲ್ವಿನ್ ನೊರೊನ್ಹಾ, ಕುಂಟಾಡಿ ಸುಧೀರ್ ಹೆಗ್ಡೆ ಅವರು ಕರೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಮಾತನಾಡಿದ ಈಶ್ವರ ಭಟ್ ಅವರು ಜಾತಿ, ಮತ, ಅಂತರ ಮರೆತು ಒಗ್ಗಟ್ಟಾಗಲು ಕಂಬಳ ಸಹಕಾರಿಯಾಗಿದೆ. ಕಂಬಳ ಆಯೋಜಕರಿಗೆ, ಕೋಣಗಳ ಮಾಲೀಕರಿಗೆ, ಓಟಗಾರರಿಗೆ ಯಾವುದೇ ದೋಷವಿಲ್ಲದೆ ಕಂಬಳ ನಡೆಯಲಿ ಎಂದು ಶುಭ ಹಾರೈ ಸಿದರು.

ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮೊದಲು ಮೂಡುಬಿದಿರೆಯ ಪುತ್ತಿಗೆ, ಆಲಂಗಾರು, ಮಹಮ್ಮಾಯಿ, ಹನುಮಂತ ದೇವಸ್ಥಾನ, ನಾಗರಕಟ್ಟೆ ಗರಡಿ ಹಾಗೂ ಅಯ್ಯಪ್ಪ ಮಂದಿರದ ಪ್ರಸಾದವನ್ನು ಮತ್ತು ತೀಥ೯ವನ್ನು ಕಂಬಳ ಕರೆಗೆ ಪ್ರೋಕ್ಷಿಸಿದರು.

ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್, ಕಂಬಳ ಸಮಿತಿಯ ಪ್ರಧಾನ ಕಾಯ೯ದಶಿ೯ ಗುಣಪಾಲ ಕಡಂಬ, ಕಾಯ೯ದಶಿ೯ ರಂಜಿತ್ ಪೂಜಾರಿ, ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಪ್ರ.ಕಾಯ೯ದಶಿ೯ ಹರಿಪ್ರಸಾದ್, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್, ರಾಜ್ಯ ಬಿಜೆಪಿ ಕಾಯ೯ಕಾರಿಣಿ ಸದಸ್ಯ ಕೆ. ಆರ್. ಪಂಡಿತ್, ವಕೀಲ ಸುರೇಶ್ ಕೆ. ಪೂಜಾರಿ ಪುರಸಭಾ ನಿಕಟಪೂವ೯ ಅಧ್ಯಕ್ಷೆ ಜಯಶ್ರೀ ಕೇಶವ್, ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ನವೀನ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಶಿವ ಪ್ರಸಾದ್ ಹೆಗ್ಡೆ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನಗಳ ಆಡಳಿತ ಮೊಕ್ತೇಸರ ಉಮೇಶ್ ಪೈ, ಬೆಳುವಾಯಿ ಗ್ರಾ. ಪಂ. ಸದಸ್ಯ ರಘು ಪೆಲಕುಂಜ, ಕೋಣಗಳ ಯಜಮಾನ ಇರುವೈಲು ಪಾಣಿಲ ಸತೀಶ್ಚಂದ್ರ ಪ್ರಮುಖರಾದ ದಿನೇಶ್ ಮಾರೂರು, ಲಕ್ಷ್ಮಣ್ ಪೂಜಾರಿ, ಯಶೋಧರ ದೇವಾಡಿಗ ಮತ್ತಿತರರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...