ಸಂವಿಧಾನ ಕೇವಲ ಪುಸ್ತಕವಲ್ಲ ಅದು ಪ್ರಜಾಪ್ರಭುತ್ವದ ಜೀವ – SDTU ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್

Date:

ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

ಮಂಗಳೂರು ಜ26 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮದ ಧ್ವಜಾರೋಹಣಗೈದ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರು ಸಂವಿಧಾನ ಕೇವಲ ಪುಸ್ತಕವಲ್ಲ ಅದು ಪ್ರಜಾಪ್ರಭುತ್ವದ ಜೀವ ಕಾರ್ಮಿಕರಾದ ನಾವೆಲ್ಲರೂ ಸ್ವಾತಂತ್ರ್ಯ ಸಮಾನತೆ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತ ನಮ್ಮ ಹಕ್ಕುಗಳನ್ನು ಸಂವಿಧಾನತ್ಮಕವಾಗಿ ಪಡೆಯಲು ಶಕ್ತಿ ಮೀರಿ ಪ್ರಯತ್ನ ಪಡಬೇಕೆಂದು ಗಣ ರಾಜ್ಯೋತ್ಸವದ ಅಂಗವಾಗಿ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ಕೋಶಾಧಿಕಾರಿ ಝುಬೈರ್ ಮಳಲಿ ಹಾಗೂ ವಿವಿಧ ಸಂಘಸಂಸ್ಥೆಗಳ ನಾಯಕರು ಉಪಸ್ಥಿತರಿದ್ದರು. ಎಸ್.ಡಿ.ಟಿ.ಯು ಮಂಗಳೂರು ಸೌತ್ ವಲಯ ಕೋಶಾಧಿಕಾರಿ ಶರೀಫ್ ಕುತ್ತಾರ್ ಸ್ವಾಗತಿಸಿದರು. ನವಾಝ್ ಕುಪ್ಪೆಪದವು ಧನ್ಯವಾದಗೈದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...