ಸಂತಾ ಟೋಪಿ ವ್ಯಾಪಾರಿಗಳೊಂದಿಗೆ ಪುಂಡಾಟಿಕೆ ಖಂಡನೀಯ; ಇದು ಸಂಘಪರಿವಾರದ ಜನಾಂಗೀಯ ದ್ವೇಷದ ಪ್ರತಿರೂಪ: ವಿಮೆನ್ ಇಂಡಿಯಾ ಮೂವ್ಮೆಂಟ್

Date:

ದೇಶಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ, ಹಿಂಸೆಯ ಪ್ರಕರಣಗಳ ಪೈಕಿ ಇತ್ತೀಚಿಗೆ ಬೆಂಗಳೂರಿನಲ್ಲಿ ಅಂಧ ಭಕ್ತಿಯ ಪರಾಕಾಷ್ಠೆಗೆ ತಲುಪಿದ ಕೆಲ ಹಿಂದುತ್ವ ಭಯೋತ್ಪಾದಕರು ದೈನಂದಿನ ದುಡಿಮೆಯಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ಬಡ ವ್ಯಾಪಾರಿಗಳೊಂದಿಗೆ ಧರ್ಮ ದ್ವೇಷದ ಅಮಲೇರಿಸಿಕೊಂಡು ಪುಂಡಾಟಿಕೆ ಮೆರೆದಿರುವ ಕ್ರತ್ಯ ತೀರಾ ಅಮಾನುಷವಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಹೇಳಿದರು.


ಜೀವನೋಪಾಯಕ್ಕಾಗಿ ಸಂತಾ ಟೋಪಿ ಮಾರುತ್ತಿದ್ದ ವ್ಯಾಪಾರಿಗಳನ್ನು ಬೆದರಿಸಿ, ವ್ಯಾಪಾರಕ್ಕೆ ನಿರ್ಬಂಧಿಸುವುದು ಭಯೋತ್ಪಾದನಾ ಕೃತ್ಯವಾಗಿದೆ. ಬಿಜೆಪಿ, ಸಂಘಪರಿವಾರದ ಧರ್ಮಾಂಧತೆಯ, ಹಿಂಸಾ ರೂಪಕ ರಾಜಕೀಯ ಯಾವ ರೀತಿ ಸಮಾಜದಲ್ಲಿ ಅರಾಜಕತೆಯನ್ನು ಸ್ರಷ್ಟಿ ಮಾಡುತ್ತಿದೆ ಎಂಬುದಕ್ಕೆ ಪ್ರಸ್ತುತ ಘಟನೆ ಸ್ಪಷ್ಟ ನಿದರ್ಶನವಾಗಿದೆ.


ಇಂತಹ ಸಮಾಜ ಘಾತುಕ ಶಕ್ತಿಗಳು ದೇಶದ ಸೌಹಾರ್ದತೆಗೆ ಮಾರಕವಾಗಿದ್ದು ಮಾತ್ರವಲ್ಲದೆ ದೇಶದ ಕಾನೂನು ಸುವ್ಯವಸ್ಥೆಯ ಮೇಲೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಇಂತಹ ಪ್ರಕರಣಗಳಿಂದಾಗಿ ದೇಶದ ಹಿರಿಮೆ, ಘನತೆಗೆ ಭಂಗ ಉಂಟಾಗುತ್ತಿದೆ. ಇಂತಹ ಅಲ್ಪಸಂಖ್ಯಾತ ವಿರೋಧಿ ಜನಾಂಗೀಯ ದ್ವೇಷ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ವಹಿಸಿ ದೇಶದ ಪ್ರತಿಯೊಬ್ಬ ಪ್ರಜೆಯ ಭದ್ರತೆ, ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...