ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Date:

ಮಂಗಳೂರು, ಜೂನ್ 20: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ ಹಳೆಯ ಕಟ್ಟಡದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಮತ್ತು ಕರ್ನಾಟಕ ವಕೀಲ ಪರಿಷತ್ತಿನ ನೂತನ ಸದಸ್ಯರು ಹಾಗೂ ಹೈಕೋರ್ಟ್‌ನ ಹಿರಿಯ ವಕೀಲರಾದ ಶ್ರೀ ಪದ್ಮಪ್ರಸಾದ್ ಹೆಗ್ಡೆ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ನೂತನ ಅಧ್ಯಕ್ಷರಾದ ಶ್ರೀ ಜಗದೀಶ್ ಕೆ. ಶೇನವ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ. ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಕೀಲರಾದ ಸುಹಾನ್ ಆಳ್ವ ಅವರು ನಿರ್ವಹಿಸಿದರು.

ಮಂಗಳೂರು ವಕೀಲರ ಸಂಘದ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಹಿರಿಯ ವಕೀಲರಾದ ಶ್ರೀ ಪ್ರೇಮನಾಥ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಜೊತೆಗೆ ಸಂಘದ ನೂತನ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯಾಂಗ ಅಧಿಕಾರಿಗಳು, ಹಿರಿಯ ಹಾಗೂ ಕಿರಿಯ ವಕೀಲರು, ಸಂಘದ ಸದಸ್ಯರು ಮತ್ತು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...