ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು

Date:

ಬೆಂಗಳೂರು: ಪತ್ರಿಕಾ ವರದಿಗಳಲ್ಲಿ ಗಮನಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರು ಮತ್ತವರ ತಂಡ ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಡಾ. ಪೀಟರ್‌ ಮಚಾದೊ ರವರನ್ನು ಭೇಟಿಯಾಗಿ, ಚರ್ಚುಗಳ ಪ್ರಾರ್ಥನಾ ವಿಧಿಗಳಲ್ಲಿ ಕನ್ನಡ ಬಳಸುವಂತೆ ಒತ್ತಾಯಪೂರ್ವಕ ಮನವಿ ಮಾಡಿರುವುದು ವರದಿಯಾಗಿದೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇದರಲ್ಲಿ ಎರಡು ಮಾತಿಲ್ಲ. ಆದರೆ ಕನ್ನಡದ ಸೋದರ ಭಾಷೆಗಳಾದ ಕೊಂಕಣಿ, ತುಳು, ಕೊಡವ, ಬ್ಯಾರಿ, ಲಂಬಾಣಿ ಮತ್ತಿತರ ಭಾಷೆಗಳನ್ನು ಮಾತೃಭಾಷೆಯನ್ನಾಗಿ ಹೊಂದಿರುವ ಲಕ್ಷಾಂತರ ಜನ ಕರ್ನಾಟಕದಲ್ಲಿ ವಾಸಿಸುತ್ತಿದ್ದಾರೆ. ಕನ್ನಡವನ್ನು ಗೌರವಿಸುತ್ತಲೇ ಅವರವರ ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಆಯಾ ಭಾಷಿಕ ಸಮುದಾಯದ್ದು. ಇದಕ್ಕೆ ದೇಶದ ಸಂವಿಧಾನವೇ ಅವಕಾಶ ನೀಡಿದೆ. ನಮ್ಮ ಸರಕಾರಗಳೂ ವಿವಿಧ ರೀತಿಯ ಸಹಕಾರ ನೀಡುತ್ತಾ ಬಂದಿವೆ.

ಭಾಷೆಯ ಉಳಿವಿನಲ್ಲಿ ಧರ್ಮ ಮಹತ್ತರ ಪಾತ್ರ ವಹಿಸಿದೆ. ಕರ್ನಾಟಕದಲ್ಲಿ ಕ್ರೈಸ್ತ ಧರ್ಮದಿಂದ ಕೊಂಕಣಿ ಭಾಷೆ ಉಳಿದಿದೆ, ಬೆಳೆದಿದೆ. ಸರಕಾರ ಕೂಡಾ ಕೊಂಕಣಿ ಅಕಾಡೆಮಿ ನೀಡಿ ಕೊಂಕಣಿ ಭಾಷೆಗೆ ಪ್ರೋತ್ಸಾಹ ನೀಡುತ್ತಿದೆ.

ಬೆಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲೂ ಕನ್ನಡದೊಡನೆ, ಇಂಗ್ಲೀಷ್‌, ತಮಿಳು, ಮಲಯಾಳಂ, ಕೊಂಕಣಿ ಭಾಷೆಗಳ ಪ್ರಾರ್ಥನಾ ವಿಧಿಗಳಿಗೆ ಅವಕಾಶವಿದೆ. ಕೇವಲ ಕನ್ನಡದಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು ಎಂಬ ಇಂದಿನ ಮನವಿ, ಮುಂದೆ ಹೇರಿಕೆಯಾಗುವ ಸಂಭವವಿದೆ. ಇದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ.

ಕನ್ನಡಕ್ಕಾಗಿ ನಾವೂ ಕೈ ಎತ್ತುತ್ತೇವೆ. ಆದರೆ ನಮ್ಮ ಪ್ರಾರ್ಥನಾ ವಿಧಿಗಳ ಭಾಷೆ ಯಾವುದಿರಬೇಕೆಂದು ನಿರ್ಧರಿಸುವವರು ನಾವೇ ವಿನಹ ಇತರರಲ್ಲ.

  • ರೊಯ್‌ ಕ್ಯಾಸ್ತೆಲಿನೊ
  • ಅಧ್ಯಕ್ಷರು, ಕಥೊಲಿಕ ಥಿಂಕ್‌ ಟ್ಯಾಂಕ್‌ ಸಮಿತಿ, ಬೆಂಗಳೂರು.
  • – ಸಾರ್ವಜನಿಕ ಸಂಪರ್ಕಾಧಿಕಾರಿ, ಮಂಗಳೂರು ಕಥೊಲಿಕ ಧರ್ಮ ಪ್ರಾಂತ್ಯ
  • – ಮಾಜಿ ಅಧ್ಯಕ್ಷರು, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...