ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನಿಂದ ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮ.

Date:

ಉಳ್ಳಾಲ: (ಅ.27) : ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಕುಟುಂಬ ಮಿಲನ ಗೊಂಚಿಲ್ 2025 ಕಾರ್ಯಕ್ರಮ ಪ್ರಕೃತಿ ರಮನೀಯ ಲಿಟಲ್ ಮಂಗಳೂರು ರೆಸಾರ್ಟ್ ನಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮೂಕಾಂಬಿಕ ಬಿಲ್ಡರ್ಸ್ ನ ಆಡಳಿತ ನಿರ್ದೇಶಕ ಚಂದ್ರಹಾಸ್ ಪಂಡಿತ್ ನೆರವೇರಿಸಿದರು, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದು, ಅಸ್ತೃ ಗ್ರೂಪ್ ನ ಸಿಇಒ ಲಂಚುಲಾಲ್ ಕೆ.ಎಸ್ ಅಂದದ ಶಾರದೆ ವಿಜೇರಿಗೆ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಧನಲಕ್ಷ್ಮಿ ಗಟ್ಟಿ, ದ.ಕ ಜಿಲ್ಲಾ ಫೊಟೊಗ್ರಾಫರ್ಸ್ ಎಸೋಸಿಯೇಶನ್ ನ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್ ಕುಂಪಲ, ಪರಿಸರವಾದಿ ಮಾಧವ ಉಳ್ಳಾಲ್, ಸಾಯಿ ಪರಿವಾರ್ ಟ್ರಸ್ಟ್ ನ ಟ್ರಸ್ಟಿಗಳಾದ ಗಣೇಶ್ ಅಂಚನ್, ಗೀತೇಶ್ ಕುತ್ತಾರ್, ಪುರುಷೋತ್ತಮ ಕಲ್ಲಾಪು, ಬುರ್ದುಗೋಳಿ ಕೊರಗಜ್ಜ ಕ್ಷೇತ್ರದ ಕಾರ್ಯದರ್ಶಿ ಪ್ರಶಾಂತ್ ಗಟ್ಟಿ ಕಾಯಂಗಳ ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ಪ್ರವೀಣ್ ಎಸ್ ಕುಂಪಲ ಸ್ವಾಗತಿಸಿ, ರಜನೀಶ್ ನಾಯಕ್ ಮತ್ತು ಕೃಷ್ಣ ಪೊನ್ನತ್ತೋಡು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಅಶೋಕ್ ಪೊಳಲಿ ಇವರಿಂದ ವಿಭಿನ್ನ ಶೈಲಿಯ ನೃತ್ಯ, ಸಾಯಿ ಪರಿವಾರ್ ಸೇವಕರಿಂದ ನೃತ್ಯ, ಹಾಸ್ಯ ಮನರಂಜೆ ನಡೆಯಿತು. ಈ ಸಂದರ್ಬದಲ್ಲಿ ರಾಜ್ಯಮಟ್ಟದ ಅಂದದ ಶಾರದೆ ಫೊಟೋ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...