ಜ್ಞಾನ ವಿಕಾಸ ಕಾರ್ಯಕ್ರಮದಡಿ ಕಲ್ಲಮುಂಡ್ಕೂರು ಸವೋ೯ದಯ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆರಂಭ

Date:

ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ ವತಿಯಿಂದ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ಶುಕ್ರವಾರ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು.

ಶ್ರೀ ಕ್ಷೇ. ಧ. ಗ್ರಾ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಧನಂಜಯ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ವಿಶೇಷ ತರಗತಿ ಯ ಉದ್ದೇಶ, ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಗ್ರಾಮಭಿವೃದ್ಧಿ ಯೋಜನೆ ಯಲ್ಲಿ ಇರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ ಅವರು ಮಕ್ಕಳ ದಿನಾಚರಣೆಯಂದು ಟ್ಯೂಷನ್ ಕ್ಲಾಸ್ ನ್ನು ಉದ್ಘಾಟನೆ ಮಾಡಿದ್ದು ಈ ವರ್ಷ 100% ಫಲಿತಾಂಶ ಬರಲಿ ಎಂದು ಶುಭ ಹಾರೈಸಿದರು.


ಶಾಲೆಯ ಮುಖ್ಯ ಶಿಕ್ಷಕ ಶಂಕರ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ಟ್ಯೂಷನ್ ಕ್ಲಾಸ್ ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪ್ರಯೋಜನವಾಗಲಿದೆ ಎಂದರು.
ಶಾಲಾಭಿವೃದ್ಧಿ ಸಮಿತಿಯ ಹರೀಶ್, ಹಿರಿಯ ಶಿಕ್ಷಕ ಸುಧಾಕರ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಜ್ಞಾನ ವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಉಪಸ್ಥಿತರಿದ್ದರು. ಶಿಕ್ಷಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...