
ಥ್ರೋಬಾಲ್ ಪಂದ್ಯಾಟ ರಾಜ್ಯಮಟ್ಟಕ್ಕೆ ಸೀಮಿತ ಆಗಿರುವ ಕಾರಣ ಕೊನೆಯದಾಗಿ ಪಂದ್ಯಾಟ ನಡೆಸಲಾಗುತ್ತದೆ, ಆದರೆ ಪರೀಕ್ಷೆಗಳು ಇರುವುದರಿಂದ ಒಂದಷ್ಟು ಬೇಗ ಅಯೋಜಿಸಲಾಗಿದೆ, ಯಾವುದೇ ಕಾರ್ಯಕ್ರಮದ ಜವಾಬ್ದಾರಿ ನೀಡಿದಾಗ ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಗಳು ನೀಡುವ ಆತಿಥ್ಯ ಇತರ ಶಾಲೆಗಳಿಗೆ ಮಾದರಿ ಎಂದು ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್ ಶ್ಲಾಘಿಸಿದರು.
ದ.ಕ.ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿರಿಗಳ ಕಚೇರಿ, ಅನುದಾನಿತ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ
ಕೋಟೆಪುರ ಟಿಪ್ಪು ಸುಲ್ತಾನ್ ಶಾಲಾ ವಠಾರದಲ್ಲಿ ಸೋಮವಾರ ನಡೆದ ಉಳ್ಳಾಲ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಮಳೆಯಿಂದಾಗಿ ನಿರಂತರ ರಜೆಯ ಕಾರಣ ಕಾರ್ಯಕ್ರಮ ನಡೆಸಲು ತೊಂದರೆಯಾದರೂ ಥ್ರೋಬಾಲ್ ಪಂದ್ಯಾಟ ಅಚ್ಚುಕಟ್ಟಾಗಿ ಅಯೋಜಿಸಲಾಗಿದೆ ಎಂದು ತಿಳಿಸಿದರು.
ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಸಂಯೋಜಕ ಎಂ.ಎಚ್.ಮಲಾರ್ ಅಧ್ಯಕ್ಷತೆ ವಹಿಸಿ, ಈಗಾಗಲೇ ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟ ನಡೆದಿದ್ದು ಈಗ ಎರಡನೆಯದಾಗಿ ಥ್ರೋಬಾಲ್ ಪಂದ್ಯಾಟ ಅಯೋಜಿಸಲಾಗಿದೆ, ಕ್ರೀಡಾಕೂಟಗಳು ಶಿಕ್ಷಣಕ್ಕೆ ಪೂರಕವಾಗಿದ್ದು ಕೇವಲ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮಾತ್ರ ಸೀಮಿತಗೊಳಿಸದೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಈ ಸಂದರ್ಭ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಜತೆಕಾರ್ಯದರ್ಶಿ ಅಬ್ದುಲ್ ಅಝೀಝ್,
ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆಎಂಕೆ ಮಂಜನಾಡಿ, ಸಿಆರ್ ಪಿ ಮೋಹನ್ ಶಿರ್ಲಾಲ್, ರಾಜ್ಯ ಕಾರ್ಯದರ್ಶಿ ತ್ಯಾಗಂ ಹರೇಕಳ, ತಾಲೂಕು ಕಾರ್ಯದರ್ಶಿ ಮೋಹನ್ ಶಿರ್ಲಾಲ್, ನೋಡೆಲ್ ಅಧಿಕಾರಿ ರಾಜೀವ ನಾಯಕ್, ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರಾದ ನಸೀಮಾ, ರಮ್ಲತ್ ಬಾನು ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಗೀತಾ ಡಿ.ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಅಖಿಲ್ ವಂದಿಸಿದರು. ಚಿತ್ರಕಲಾ ಶಿಕ್ಷಕ ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.