ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಶವವಾಗಿ ಪತ್ತೆ.

Date:

ಸೋಮೇಶ್ವರದ ಗದಾತೀರ್ಥ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ. ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಿಂದ ಆತ್ಮಹತ್ಯೆಗೈದಿರುವ ಶಂಕೆ.

ಉಳ್ಳಾಲ (ಮಾ11): ಕಳೆದ ಸೋಮವಾರದಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಶವವು ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಲ್ಲಿ ಯುವಕ ಆತಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.

ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿಯ ನಿವಾಸಿ ‌ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕನಾಗಿದ್ದಾನೆ.ಮಂಗಳೂರಿನ ಮಂಗಳೂರಿನ ಕದ್ರಿಯ ವೇದ ಮೋಟಾರ್ಸ್ನಲ್ಲಿ ಉದ್ಯೋಗದಲ್ಲಿದ್ದ ವಿವೇಕ್ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿದ್ದರು. ಅಂದು ರಾತ್ರಿ 9 ಗಂಟೆಯ ಸುಮಾರಿಗೆ ತಾಯಿಗೆ ಫೋನ್ ಮಾಡಿ ದೇವಸ್ಥಾನಕ್ಕೆ ತೆರಳುವುದಾಗಿ ತಿಳಿಸಿದ್ದರೆನ್ನಲಾಗಿದೆ.

ಮಧ್ಯರಾತ್ರಿ 12 ಗಂಟೆಯಾದರೂ ಮಗ ಮನೆಗೆ ವಾಪಸ್ಸು ಬರದೇ ಇದ್ದ ಕಾರಣ ತಾಯಿ ಪೋನ್ ಮಾಡಿದ್ದು, ವಿವೇಕ್ ಕರೆಯನ್ನು ಸ್ವೀಕರಿಸಿರಲಿಲ್ಲ, ವಿವೇಕ್ ಮಂಗಳವಾರವೂ ಮನೆಗೂ ಬಾರದೆ,‌ ಮೊಬೈಲ್ ಕರೆಯನ್ನು ಸ್ವೀಕರಿಸದೇ ಇದ್ದಾಗ ಗಾಬರಿಗೊಂಡ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದು, ಕೊನೆಗೆ ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ವಿವೇಕ್ ಅವರ ದ್ವಿಚಕ್ರ ವಾಹನದ ಜೊತೆ ಪಾದರಕ್ಷೆಗಳು ಮಂಗಳವಾರ ಬೆಳಿಗ್ಗೆ ಸೋಮೇಶ್ವರ ಕಡಲಕಿನಾರೆಯಲ್ಲಿ ಪತ್ತೆಯಾಗಿತ್ತು. ಮೃತ ವಿವೇಕ್ ವಿವಾಹಿತನಾಗಿದ್ದು ಪತ್ನಿ ಆತನಿಂದ ವಿಚ್ಚೇದನ ಪಡೆದು ಕೆಲ ದಿನಗಳ ಹಿಂದಷ್ಟೆ ಬೇರೆ ಮದುವೆಯಾಗಿದ್ದು. ಇದೇ ವಿಚಾರದಲ್ಲಿ ವಿವೇಕ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ. ಮೃತ ವಿವೇಕ್ ತಂದೆ,ತಾಯಿ ಮತ್ತು ಏಕೈಕ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...