ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿದ ಕಳ್ಳರು

Date:

ಉಳ್ಳಾಲ: ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ನಡೆದಿದೆ.

ಘಟನೆ ವಿವರ: ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ ಬೀಗ ಹಾಕಿ ಕುಟುಂಬ ಸಹಿತ ಸೌದಿಗೆ ಹೋಗಿದ್ದರು. ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಮೈನಾಝ್ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.ಅಲ್ಲದೇ ಅಡುಗೆ ಕೋಣೆ ಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್ ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಚಿನ್ನಾಭರಣ ದೋಚಲು ಬಂದಿದ್ದರು: ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದರು.ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ.ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...