ಶಿಕ್ಷಕನಿಂದ ವಿದ್ಯಾಥಿ೯ಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ : ಫೊಕ್ಸೋ ಪ್ರಕರಣ ದಾಖಲು

Date:

ಮೂಡುಬಿದಿರೆ: ಕಳೆದೆರಡು ವರುಷಗಳ ಹಿಂದೆ ಪ್ರೌಢಶಾಲೆಯ ವಿದ್ಯಾರ್ಥಿಯೋವ೯ನಿಗೆ ಅದೇ ಶಾಲೆಯ ಅಧ್ಯಾಪಕ ಸ್ಪೆಶಲ್ ತರಗತಿಯ ಆಮಿಷವೊಡ್ಡಿ, ನಗ್ನ ವಿಡಿಯೋ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯ ಇದೀಗ ಬೆಳಕಿಗೆ ಬಂದಿದ್ದು ಈ ಸಂಬಂಧ ಶಾಲಾ ಶಿಕ್ಷಕ ಅಲ್ತಾಫ್ ಎಂಬಾತನ ವಿರುದ್ಧ ಮೂಡುಬಿದಿರೆ ಪೊಲೀಸರು ಫೊಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2023ರಲ್ಲಿ ಸಂತ್ರಸ್ತ ಬಾಲಕ ಪಳಕಳ ಬಳಿಯ ಅಲ್ ಫುರ್ಕಾನ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಗ, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿ ಶಿಕ್ಷಕ ಅಲ್ತಾಫ್, ಬಾಲಕನನ್ನು ಹಳೆ ಮೀನು ಮಾರುಕಟ್ಟೆ ಸಮೀಪವಿದ್ದ ತನ್ನ ಕೊಠಡಿಗೆ ಕರೆಸಿಕೊಂಡಿದ್ದನು. ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೋ ಚಿತ್ರೀಕರಿಸಿದ್ದನು. ನಂತರ ಆ ವಿಡಿಯೋ ತೋರಿಸಿ ಬೆದರಿಕೆ ಹಾಕಿದ ಆರೋಪಿಯು, ವಿಷಯ ಯಾರಿಗಾದರೂ ತಿಳಿಸಿದರೆ ಪರೀಕ್ಷೆ ಬರೆಯಲು ಬಿಡುವುದಿಲ್ಲ ಮತ್ತು ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದನು. ಅಷ್ಟೇ ಅಲ್ಲದೆ, ಬಾಲಕನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿರೋಧಿಸಿದಾಗ ಬೆಲ್ಟ್‌ನಿಂದ ಹಲ್ಲೆ ನಡೆಸಿರುವುದು ವರದಿಯಾಗಿದೆ.

ಕಳೆದ ಕೆಲವು ದಿನಗಳಿಂದ ಬಾಲಕನ ಆರೋಗ್ಯದಲ್ಲಿ ಏರುಪೇರಾದಾಗ ಅನುಮಾನಗೊಂಡ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಮತ್ತು ಪೋಷಕರ ವಿಚಾರಣೆ ವೇಳೆ ಬಾಲಕನು ನಡೆದ ಘಟನೆಯನ್ನು ವಿವರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 324, 506 ಮತ್ತು ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...