
ಉಳ್ಳಾಲ :ಕರ್ನಾಟಕ ಸರ್ಕಾರದ ಹಜ್, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಅವರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಬೆಂಗಳೂರಿನಲ್ಲಿರುವ ಯುಟಿ ಖಾದರ್ ಅವರ ಕಚೇರಿ ಯಲ್ಲಿ ಭೇಟಿ ಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ದರ್ಗಾ ಸಮಿತಿ ಕೋಶಾಧಿಕಾರಿ ನಾಝೀಮ್ ಮುಕಚೇರಿ, ಕಾರ್ಯದರ್ಶಿ ಮುಸ್ತಫಾ ಮದನಿ ನಗರ, ಸದಸ್ಯ ಅಬ್ದುಲ್ ಖಾದರ್ ಕೋಡಿ ಉಪಸ್ಥಿತರಿದ್ದರು.


