ಡಾ.ವಹಿದಾ ಸುಲ್ತಾನರಿಗೆ ಮಂಗಳೂರು ವಿ.ವಿ. ನುಡಿನಮನ

Date:

ಕೊಣಾಜೆ: ಪ್ರಾಮಾಣಿಕತೆ, ವಿನಯತೆ ಹಾಗೂ ಸರಳ ವ್ಯಕ್ತಿತ್ವದ ಸಹೃದಯಿ ಪ್ರಾಧ್ಯಾಪಕಿಯಾಗಿದ್ದ ಡಾ.ವಹಿದಾ ಸುಲ್ತಾನ ಮಂಗಳೂರು ವಿ.ವಿ.ಯಲ್ಲಿ ಅನೇಕ ಜವಬ್ಧಾರಿಯೊಂದಿಗೆ ಉತ್ತಮ ಆಡಳಿತಗಾರರೂ ಆಗಿದ್ದರು. ವಿದ್ಯಾರ್ಥಿಗಳಿಗೆ, ಬಡಮಕ್ಕಳಿಗೆ ಸಂಕಷ್ಟಗಳು ಎದುರಾದಾಗ ಸಹಾಯ ಮಾಡುವ ತಾಯಿ ಹೃದಯ ಅವರದ್ದಾಗಿತ್ತು. ಅವರ ಕೊಡುಗೆ, ನೆನಪುಗಳು ಸದಾ ಶಾಶ್ವತವಾಗಿರಲಿ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಹೇಳಿದ್ದಾರೆ..
ಇತ್ತೀಚೆಗೆ ಮೈಸೂರಿನಲ್ಲಿ ನಿಧನರಾದ ಮಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕಿ ಡಾ.ವಹಿದಾ ಸುಲ್ತಾನ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಸಿಜೆ ವಿಭಾಗದ ವತಿಯಿಂದ ಗುರುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿನಮನ ಸಲ್ಲಿಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ‌ ಬಿ.ಎನ್.ಅವರು ಮಾತನಾಡಿ, ಪ್ರಾಧ್ಯಾಪಕಿ ವಹಿದಾ ಸುಲ್ತಾನ ಅವರು ತಮ್ಮ ಸ್ವಪ್ರಯತ್ನದಿಂದ ಜ್ಞಾನ ಸಂಪಾದಿಸಿ ಜೀವನದಲ್ಲಿ ಹಂತ ಹಂತವಾಗಿ ಸಾಧನೆ ಮಾಡಿದವರು. ಮಂಗಳೂರು ವಿವಿಯಲ್ಲಿ ಅವರಿಂದ ವಿದ್ಯೆ ಕಲಿತ ಅನೇಕ ವಿದ್ಯಾರ್ಥಿಗಳು ಮಂಗಳೂರು , ಬೆಂಗಳೂರು ಸೇರಿದಂತೆ ವಿದೇಶಗಳಲ್ಲಿಯೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮಂಗಳೂರು ವಿವಿ ಕುಲಸಚಿವ‌ ಸಂತೋಷ್ ಬಿ ಜಗಲಸಾರ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರಾಧ್ಯಾಪಕರಾದ ಪ್ರೊ.ಪರಿಣಿತ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ಅವರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಂಗಳೂರು ವಿವಿ ಎಂಸಿಜೆ ವಿಭಾಗದ ಮುಖ್ಯಸ್ಥ ಉಮೇಶ್ಚಂದ್ರ ಅವರು ಡಾ.ವಹಿದಾ ಸುಲ್ತಾನ ವಿಭಾಗಕ್ಕೆ ನೀಡಿದ ಕೊಡುಗೆ ಸ್ಮರಿಸಿ, ಸ್ವಾಗತಿಸಿ, ನಿರೂಪಿಸಿದರು.
ಮೌನ ಪ್ರಾರ್ಥನೆಯೊಂದಿಗೆ ಡಾ.ವಹೀದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...