ಜಾಹೀರಾತು ನೀಡಿ ವಂಚಿಸಿದ ವಾಸುದೇವ ಆರ್ ಬಂಧನ

Date:

ಮಂಗಳೂರು, ನ.05: ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ದಕ್ಷಿಣಕನ್ನಡ ಜಿಲ್ಲಾ ಸೈಬ‌ರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ವಾಸುದೇವ ಆರ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇನ್ಸಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್‌ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿದ್ದ. ಅಲ್ಲದೇ ವ್ಯಕ್ತಿಯೊಬ್ಬರಿಗೆ ಸುಮಾರು 24,78,274/- ರೂ ವಂಚಿಸಿದ್ದ.ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬ‌ರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್‌ಗಳು ಹಾಗೂ ರೂ 20,300/- ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಒಟ್ಟು 1,60,300/ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...