ಮೂಡಬಿದಿರೆ ಸಮುದಾಯ ಆರೋಗ್ಯ ಕೇಂದ್ರ ಮುಂಭಾಗ ವಾಹನ ಪಾಕಿ೯ಂಗ್: ಕ್ರಮಕೈಗೊಳ್ಳಲು ಆಗ್ರಹ

Date:

ಮೂಡುಬಿದಿರೆ: ತಾಲೂಕಿನ ಸಮುದಾಯ ಅರೋಗ್ಯ ಕೇಂದ್ರದ ಮುಂಭಾಗದ ರಸ್ತೆಯಲ್ಲಿ ಶಾಂತಿ ಪ್ರಸಾದ್ ಹೆಗ್ಡೆ ಎಂಬ ವ್ಯಕ್ತಿಯೋವ೯ರು ತಮ್ಮ ವಾಹನವನ್ನು ಪಾಕಿ೯ಂಗ್ ಮಾಡುತ್ತಿರುವುದರಿಂದ ಆರೋಗ್ಯ ಕೇಂದ್ರಕ್ಕೆ ಬರುವವರಿಗೆ ತೊಂದರೆಯಾಗುತ್ತಿದ್ದು ಈ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸುವಂತೆ ಕೆಪಿಸಿಸಿ ಸಂಯೋಜಕ, ವಕೀಲ ಪದ್ಮಪ್ರಸಾದ್ ಜೈನ್ ಅವರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಆಸ್ಪತ್ರೆಯ ಮುಂಭಾಗದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಶಾಂತಿ ಪ್ರಸಾದ್ ಹೆಗ್ಡೆ ಅವರ ಕಚೇರಿಯಿದ್ದು, ಅವರು ತನ್ನ ವಾಹನವನ್ನು ಇಡೀ ದಿನ ಆಸ್ಪತ್ರೆ ಎದುರಿಗೆ ಪಾರ್ಕಿಂಗ್ ಮಾಡಿ ಹೋಗುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ನೋ-ಪಾಕಿ೯ಂಗ್ ಸ್ಥಳವಾಗಿದ್ದು ಹೊರಗಿನ ಖಾಸಗಿ ವಾಹನ ನಿಲ್ಲಿಸಲು ನಿಷೇಧಿಸಲಾಗಿದೆ ಎಂಬುದಾಗಿ ಬೋರ್ಡ್ ಇದ್ದರೂ ಈ ವ್ಯಕ್ತಿ ದುರಂಕಾರದಿಂದ ವರ್ತಿಸುತ್ತಾನೆ. ಆಸ್ಪತ್ರೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ದರ್ಪದಿಂದ ಮಾತಾಡುತ್ತಿದ್ದು ಇದರಿಂದ ಸರಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ತೊಂದರೆ ಆಗುತ್ತಿದೆ.

ಆದುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹಾಗು KA-19 MB 9811 ಸದ್ರಿ ವಾಹನಗಳನ್ನು ಪೊಲೀಸ್‌ ಇಲಾಖೆ ಯಿಂದ ಸೀಜ್ ಮಾಡಲು ಆದೇಶ ನೀಡುವಂತೆ ಸಾರ್ವಜನಿಕರ ಪರವಾಗಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...