‘ವೇಳ್ ಘಡಿ’ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆಕೊಂಕಣಿ ಚಿತ್ರರಂಗಕ್ಕೆ ಪ್ರೋತ್ಸಾಹ ಅಗತ್ಯ: ಸಚಿವ ಡಾ‌. ಯು.ಟಿ. ಖಾದರ್ ಫರೀದ್

Date:

ಮಂಗಳೂರು: ಲೋಬೋ ಪ್ರೊಡಕ್ಷನ್ ಹಾಗೂ ವಿಲ್ಸನ್ ಲೋಬೋ ನಿರ್ಮಾಣದ ಬಹುನಿರೀಕ್ಷಿತ ‘ವೇಳ್ ಘಡಿ’ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಸಚಿವ ಡಾ. ಯು.ಟಿ. ಖಾದರ್ ಫರೀದ್ ನಿವಾಸದಲ್ಲಿ ನಡೆಯಿತು. ಆರೋಗ್ಯ, ಕುಟುಂಬ ಕಲ್ಯಾಣ, ವಕ್ಫ್, ಅಲ್ಪಸಂಖ್ಯಾತರ ಹಾಗೂ ಹಜ್ ಸಚಿವ ಡಾ. ಯು.ಟಿ. ಖಾದರ್ ಅವರು ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಬೆಳವಣಿಗೆಯಲ್ಲಿ ಚಲನಚಿತ್ರಗಳ ಪಾತ್ರ ಮಹತ್ವದ್ದಾಗಿದೆ. ಸ್ಥಳೀಯ ಭಾಷೆಯ ಚಿತ್ರಗಳು ಜನರ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನಶೈಲಿಯನ್ನು ಪ್ರತಿಬಿಂಬಿಸುತ್ತವೆ. ಇಂತಹ ಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಲೋಬೋ ಫೌಂಡೇಶನ್ ಅಧ್ಯಕ್ಷ ಹಾಗೂ ಚಿತ್ರದ ನಿರ್ಮಾಪಕ ಜಾನ್ ವಿಲ್ಸನ್ ಲೋಬೋ ಅವರು ನೂತನವಾಗಿ ಆಯ್ಕೆಯಾದ ಸಚಿವ ಡಾ. ಯು.ಟಿ. ಖಾದರ್ ಫರೀದ್ ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ‘ವೇಳ್ ಘಡಿ’ ಕೊಂಕಣಿ ಚಲನಚಿತ್ರದ ಕಥೆಗಾರ ಹಾಗೂ ಸಹನಿರ್ದೇಶಕ ರೋಶನ್ ನೆಲ್ಲಿಗುಡ್ಡೆ, ನಟ ಸುನಿಲ್ ನೆಲ್ಲಿಗುಡ್ಡೆ, ಛಾಯಾಗ್ರಾಹಕ (DOP) ಫೆಸ್ವಿತ್ ಡಿಸೋಜ ಹಾಗೂ ಸಹಾಯಕ ಛಾಯಾಗ್ರಾಹಕ ರಾಯನ್ ಡಿಸೋಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...