ಮಾಣಿ: ಸುರಿಕುಮಾರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್, ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.

ಮಂಗಳೂರಿನಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಿಗ್ಗೆ ಜಾವ ನಡೆದಿದೆ.ಘಟನೆಯಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


