ಸೆ. 13ರಂದು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಕರ್ನಾಟಕದ 2026ರ ರಾಜ್ಯ ಪ್ರತಿನಿಧಿ ಸಭೆ

Date:

ಬೆಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಕರ್ನಾಟಕದ 2026ರ ರಾಜ್ಯ ಪ್ರತಿನಿಧಿ ಸಭೆಯು ಸೆಪ್ಟೆಂಬರ್ 13, 2026ರಂದು ಬೆಂಗಳೂರಿನ ಪಾಲನ ಭವನದಲ್ಲಿ ನಡೆಯಲಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಮಹಿಳಾ ಪ್ರತಿನಿಧಿಗಳು ಹಾಗೂ ರಾಜ್ಯ ಮಟ್ಟದ ನಾಯಕಿಯರು ಭಾಗವಹಿಸಲಿರುವ ಈ ಪ್ರತಿನಿಧಿ ಸಭೆಯಲ್ಲಿ 2026–29ರ ಅವಧಿಗೆ ನೂತನ ಕರ್ನಾಟಕ ರಾಜ್ಯ ಸಮಿತಿಯ ನಾಯಕಿಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ರಾಷ್ಟ್ರೀಯ ಸಮಿತಿಯ ನಾಯಕಿಯರು ಚುನಾವಣಾ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಷ್ಟ್ರೀಯ ನಾಯಕಿಯರಾದ ಫಾಯೆಝಾ ಶಫೀಕ್ ಹಾಗೂ Adv. H. ಖಾಲಿದಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಜ್ಯ ಪ್ರತಿನಿಧಿ ಸಭೆಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ನಡೆಸಿದ ವಿವಿಧ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಚಟುವಟಿಕೆಗಳ ವಿಸ್ತೃತ ವರದಿಯನ್ನು ಮಂಡಿಸಲಾಗುವುದು. ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಪ್ರತಿನಿಧಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

ವಿಶೇಷವಾಗಿ, ಸ್ಥಳೀಯ ಸಂಸ್ಥೆಗಳಿಂದ ವಿಧಾನಸಭೆ ಮತ್ತು ಸಂಸತ್ತಿನವರೆಗೆ ಮಹಿಳೆಯರಿಗೆ ಸಮಾನ ರಾಜಕೀಯ ಪ್ರಾತಿನಿಧ್ಯ ಹಾಗೂ ನಿರ್ಣಯ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಅಗತ್ಯ ಕುರಿತು ಚರ್ಚಿಸಲಾಗುವುದು. ಮಹಿಳೆಯರ ಹಕ್ಕು, ಗೌರವ, ಸುರಕ್ಷತೆ, ಸ್ವಾವಲಂಬನೆ ಮತ್ತು ನಾಯಕತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಹಾಗೂ ಕಾರ್ಯತಂತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...