
ಉಳ್ಳಾಲ : ಉಳ್ಳಾಲ ಮೂಲದ ಮಿನ್ನತ್ ಎಂಬ ಮದುವೆ ಸಭಾಂಗಣ ಸೇರಿದಂತೆ ಬಟ್ಟೆ ಮಳಿಗೆಯಲ್ಲಿ ಚಿನ್ನದ ಸರ ಕಳವು ನಡೆಸಿದ ಪ್ರಕರಣದಲ್ಲಿ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಿ ಒಟ್ಟು 18 ಗ್ರಾಂ ತೂಕದ ಚಿನ್ನದ ಸರಗಳನ್ನು (ಮೌಲ್ಯ ರೂ.1.80 ಲಕ್ಷ) ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ಅವರು ತಮ್ಮ ಮಕ್ಕಳೊಂದಿಗೆ ಜೂ. 02-ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತೆರಳಿದಾಗ, ಮಳೆ ಕಾರಣದಿಂದ ಸ್ಟ್ರೀಟ್ ಪ್ಯಾಲೇಸ್ ಬೇಕರಿಯ ಮುಂದೆ ನಿಂತಿದ್ದರು. ಆ ಸಂದರ್ಭದಲ್ಲಿ ಬುರ್ಖಾ ಧರಿಸಿದ್ದ ಮಹಿಳೆ ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಳು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮಾಹಿತಿ ಆಧಾರದ ಮೇಲೆ ಪೊಲೀಸರು ಸೆ. 12 ರಂದು ಮಿನ್ನತ್ ಅವರನ್ನು ಬಂಧಿಸಿ, ಕಳವಾದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಜು.9 ರಂದು ದಾಖಲಾಗಿ ತನಿಖೆ ಪ್ರಾರಂಭವಾಗಿತ್ತು. ನ ಕೆ.ಎಮ್.ಎಸ್. ಕನ್ವೆನ್ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಬ್ಯಾಗಿನಿಂದ 8 ಗ್ರಾಂ ತೂಕದ ಚಿನ್ನದ ಸರವನ್ನು ಕೂಡ ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾಳೆ. ಈ ಪ್ರಕರಣ ಕೊಣಾಜೆ ಠಾಣೆಯಲ್ಲಿ ದಾಖಲಾಗಿತ್ತು.
ಅದರಲ್ಲಿ ಕಳವಾದ ಸರವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತೆಯಾದ ಮಿನ್ನತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಪೊಲೀಸ್ ಆಯುಕ್ತರ ಪ್ರಕಾರ, ಆರೋಪಿಯಿಂದ ಒಟ್ಟು 18 ಗ್ರಾಂ ಚಿನ್ನದ ಸರಗಳನ್ನು ವಶ ಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.