Date:

ವಿಮೆನ್ ಇಂಡಿಯಾ ಮೂವ್ಮೆಂಟ್ – ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಕರ್ನಾಟಕದಾದ್ಯಂತ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಸ್ವಾತಂತ್ರ್ಯದಿಂದ ನಿರ್ಭಯತೆಯೆಡೆಗೆ ಎಂಬ ಘೋಷಣೆಯೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವಿಧ ಜಿಲ್ಲೆಗಳ ಹಲವು ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು.

ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮಗಳು, ಮಕ್ಕಳಿಗೆ ಆಟೋಟ ಸ್ಪರ್ಧೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸ್ವಾತಂತ್ರ್ಯದ ಮಹತ್ವವನ್ನು ಸಾರಲಾಯಿತು. ನಿಜವಾದ ಸ್ವಾತಂತ್ರ್ಯವೆಂದರೆ ಒಂದು ಬಂಧನದಿಂದ ಮುಕ್ತಿಯಲ್ಲ , ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾತಂತ್ರ್ಯದ ನಿಜವಾದ ಸವಿಯನ್ನು ಸವಿಯಬೇಕು. ಪೂರ್ವಜರು ಜಾತಿ, ಮತ, ಭೇದ ಮರೆತು ಹೋರಾಟವನ್ನು ನಡೆಸಿ ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಅದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಸಂದರ್ಭದಲ್ಲಿ ಮಹಿಳೆಯರು ಸ್ವತಂತ್ರವಾಗಿ, ಸುರಕ್ಷಿತವಾಗಿ, ಸಮಾನತೆಯಿಂದ ಹಾಗೂ ನಿರ್ಭಯವಾಗಿ ಬದುಕುವಂತಹ ಸಮಾಜ ನಿರ್ಮಾಣದ ಸಂಕಲ್ಪವನ್ನು ಮತ್ತೊಮ್ಮೆ ದೃಢಪಡಿಸಲಾಯಿತು.

ಕಾರ್ಯಕ್ರಮಗಳಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನಾಯಕಿಯರು ಮತ್ತು ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ, ಸ್ವಾತಂತ್ರ್ಯ, ಮಹಿಳಾ ಹಕ್ಕುಗಳು, ಸಮಾನತೆ ಹಾಗೂ ಮಹಿಳಾ ಸುರಕ್ಷತೆಯ ಕುರಿತು ತಮ್ಮ ಸಂದೇಶವನ್ನು ಹಂಚಿಕೊಂಡರು. ವಿವಿಧ ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮಗಳು ಮಹಿಳೆಯರಲ್ಲಿ ಸ್ವಾತಂತ್ರ್ಯ, ಆತ್ಮವಿಶ್ವಾಸ, ಹಕ್ಕುಗಳ ಅರಿವು ಹಾಗೂ ನಿರ್ಭಯತೆಯ ಸಂದೇಶವನ್ನು ಬಿತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದವು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...