ಪಡುಮಾನಾ೯ಡಿನಲ್ಲಿ ಮಹಿಳಾ ಗ್ರಾಮಸಭೆ: ದುರುದ್ದೇಶದ ವಿಚ್ಛೇದನಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ: ವಕೀಲೆ ರೂಪಾ ಬಲ್ಲಾಳ್

Date:

ಮೂಡುಬಿದಿರೆ: ಮಹಿಳೆಯರು ಅಥವಾ ಪುರುಷರು ಮನಸ್ಸಿನ ನೆಮ್ಮದಿಗಾಗಿ ವಿಚ್ಛೇದನಕ್ಕೆ ಅರ್ಜಿಯ ಮೊರೆ ಹೋಗಬೇಕೇ ಹೊರತು ದುರುದ್ದೇಶದಿಂದ ಹೋದರೆ ಕಾನೂನಿನಲ್ಲಿಯೂ ಅವಕಾಶ ಇರುವುದಿಲ್ಲ ಎಂದು ವಕೀಲೆ ರೂಪಾ ಬಲ್ಲಾಳ್ ಹೇಳಿದರು.
ಅವರು ಶುಕ್ರವಾರ ಪಡುಮಾರ್ನಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಮಾರ್ನಾಡು ಮತ್ತು ಮೂಡುಮಾರ್ನಾಡು ಗ್ರಾಮದ ಮಹಿಳಾ ಗ್ರಾಮ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು.

ಸಿಡಿಪಿಒ ವೀಣಾ ಹೆಗ್ಡೆ ಮಾತನಾಡಿ ಪ್ರಸ್ತುತ ಕಾಘಟ್ಟದ ಮಹಿಳೆಯರು ಸಮಾಜದಲ್ಲಿ ನೀರಿನಂತೆ ಹೊಂದಾಣಿಕೆಯ ಜೀವನ ನಡೆಸಬೇಕು. ಹಾಗೆಯೇ ಮಹಿಳೆಯರ ರಕ್ಷಣೆಗೆ ಇಲಾಖೆ ಇದೆ ಎಂದು ಅವರು ತಾವು ತಪ್ಪು ಮಾಡಿ ಇಲಾಖೆಯನ್ನು ದುರುಪಯೋಗ ಪಡಿಸುವ ಕೆಲಸ ಮಾಡಬಾರದು ಎಂದು ತಿಳಿಸಿದರು.

ಸನ್ಮಾನ: ನಾಟಿ ವೈದ್ಯೆ ಸುನಂದಾ ಶೆಟ್ಟಿ ಬೇಂಗೂರಿ ಹಾಗೂ ತುಳುನಾಡ ಧಾರ್ಮಿಕ ಹಾಗೂ ಜಾನಪದ ಕಲೆ ದೈವಾರಾಧನೆಯ ಸಂಧಿ ಪಾದ೯ನ ದಲ್ಲಿ ಸಾಧನೆ ಮಾಡಿದ ಶೋಭಾ ಅಚ್ಚರ ಕಟ್ಟೆ ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಕರ್ಕೇರಾ,ಸಿ.ಎಸ್ ಕಲ್ಯಾಣಿ ವೇದಿಕೆಯಲ್ಲಿ ಹಾಜರಿದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ ವಿನೋದ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಜೀವಿನಿ ಒಕ್ಕೂಟದ ಸದಸ್ಯರು, ಸ್ವ ಸಹಾಯ ಗುಂಪಿನ ಸದಸ್ಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

ಪಂಚಾಯತ್ ಸಿಬಂದಿ ನಿಶಾ ಶೆಟ್ಟಿ ಸ್ವಾಗತಿಸಿದರು. ಪಿಡಿಒ ಸಾಯೀಶ ಚೌಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಕು.ವನಿತಾ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...