
ಮುಂಬಯಿ, ಸೆ.೦೫: ಬಂಟ್ಸ್ ಸಂಘ ಮುಂಬಯಿ ವಾರ್ಷಿಕವಾಗಿ ಕೊಡಮಾಡುವ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದ ೨೦೨೫ನೇ ವಾರ್ಷಿಕ ದಿ| ವೈ.ಜಿ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಬೃಹನ್ಮುಂಬಯಿಯಲ್ಲಿನ ಪತ್ರಕರ್ತ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸದಸ್ಯ ಡಾ| ದಿನೇಶ್ ಶೆಟ್ಟಿ ರೆಂಜಾಳ ಇವರನ್ನು ಆಯ್ಕೆ ಮಾಡಲಾಗಿದೆ.
ಇದೇ ಬರುವ ಭಾನುವಾರ (ಸೆ.೦೭) ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗುವ ೯೭ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನಿಸಿ ಗೌರವಿಸಲಾಗುವುದು ಎಂದು ಬಂಟ್ಸ್ ಸಂಘದ ಗೌ| ಪ್ರ| ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ ತಿಳಿಸಿದ್ದಾರೆ.