ಕಾವೂರು ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಉದ್ಘಾಟನಾ ಕಾರ್ಯಕ್ರಮ

Date:

ಕಾವೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಇದರ ಉದ್ಘಾಟನಾ ಕಾರ್ಯಕ್ರಮ ಕಾವೂರು ವ್ಯವಸಾಯ ಸೇವಾ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಡಾ ಸಂಸದ್ ರವರು ಸುಮಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಿರುತ್ತಾರೆ. ಆ ನಿಟ್ಟಿನಲ್ಲಿ ಈ ಟ್ರಸ್ಟ್ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನಿಡುತ್ತಾದೆ ಎಂಬ ವಿಶ್ವಾಸ ನನ್ನಗಿದೆ. ಈ ಟ್ರಸ್ಟ್ ಗೆ ನನ್ನ ಬೆಂಬಲ ಹಾಗೂ ಸಹಕಾರ ಯಾವತ್ತು ಇದೆ ಎಂದು ಹೇಳಿದರು‌.

ಕಾವೂರು ಪೋಲೀಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಬಿರಂದಾರ್ ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ನ ಲೋಗೊ ಅನಾವರಣಗೈದರು. ಬಳಿಕ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ಮಹಿಳೆಯರಿಗೆ ವಿಶೇಷವಾದ ಗೌರವವನ್ನು ನೀಡುತ್ತಾರೆ‌ ಆ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯದ ಸಂಖ್ಯೆ ಕಡಿಮೆ ಮಹಿಳೆಯರಿಗೆ ಮಕ್ಕಳಿಗೆ ಸಮಸ್ಯೆಯಾದಾಗ ಪ್ರಚಲಿತ ಚಾರಿಟೇಬಲ್ ಅವರೊಂದಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಡಾ.ಸಂಸದ್ ಕುಂಜತ್ತಬೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ನ್ಯಾಯವಾದಿ ಶೈಲಜಾ ರಾಜೇಶ್, ನಂದಿನಿ ಮಹಿಳಾ ಮಂಡಳಿಯ ಗೌರವಾಧ್ಯಕ್ಷ ಭಾರತಿ, ಲೇಖಕ ಬದ್ರುದ್ದೀನ್ ಕೂಳೂರು, ರಂಗಸ್ವರೂಪ ಕುಂಜತ್ತಬೈಲ್(ರಿ) ಅಧ್ಯಕ್ಷ ರಹ್ಮಾನ್ ಖಾನ್ ಕುಂಜತ್ತಬೈಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಹನಿಷ ಸವಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ವಿಧಿಶ ಸಾಲಿಯಾನ್ ಪ್ರಾರ್ಥನೆಗೈದರು. ಟ್ರಸ್ಟಿ ಕವಿತಾ ಶ್ರೀರಾಮ್ ಸ್ವಾಗತಿಸಿದರು. ಟ್ರಸ್ಟಿ ತಝ್ಬಯ ಎಸ್‌.ಆರ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...